ಹಾಡಹಗಲೇ ಪೊಲೀಸ್, ಸಿಬಿಐ, ಇಡಿ, ಐಟಿ ಇಲಾಖೆಗಳ ದುರ್ಬಳಕೆಯಾಗುತ್ತಿರುವ ಬಗ್ಗೆ ಇಡೀ ದೇಶದ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇಂತಹವರು ತಮ್ಮ ರಾಜಕೀಯ ವಿರೋಧಿಗಳ ಫೋನ್ಗಳನ್ನು ಕದ್ದು ಆಲಿಸದೆ ಬಿಡುತ್ತಾರೆಯೇ? ಆದರೆ ಇಂತಹ ಬೆದರಿಕೆಗಳಿಗೆ ನಾನಾಗಲಿ, ನನ್ನ ಪಕ್ಷದ ಯಾವ ನಾಯಕರಾಗಲಿ ಜಗ್ಗುವವರಲ್ಲ, ಬಗ್ಗುವವರೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ.