ಬೆಂಗಳೂರು: ತೀವ್ರ ಕೂತುಹಲ ಮೂಡಿಸಿದ್ದ ರಾಜ್ಯದ ನೂತನ ಸಿಎಂ ಯಾರು ಎಂಬ ಬಗ್ಗೆ ವಿಷಯಕ್ಕೆ ತೆರೆ ಬಿದ್ದಿದ್ದು, ನಿರೀಕ್ಷೆಯಂತೆ ನೂತನ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯ ನಾಯಕನಾಗಿ ಡಿ.ಕೆ.ಶಿವಕುಮಾರ್(D K Shivakumar) ಆಯ್ಕೆಯಾಗಿದ್ದಾರೆ. ಇಂದು ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಡಿಕೆಶಿ ಹೆಸರನ್ನು ಘೋಷಣೆ ಮಾಡಿದ್ದು, ಡಾ.ಜಿ.ಪರಮೇಶ್ವರ್ ಅನುಮೋದಿಸಿದ್ದಾರೆ.