ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​ ಪ್ರಮಾಣ ವಚನ; ಆರ್ಥಿಕ‌ ಸಲಹೆಗಾರರಾಗಿ ನಿವೃತ್ತ IAS ಅಧಿಕಾರಿ ಎಲ್.ಕೆ.ಅತೀಕ್ ನೇಮಕ! L.K. Ateeq Appointed as Economic Advisor to CM D.K. Shivakumar

ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ
ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ
Published on

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ರಾಜ್ಯ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​ ಪ್ರಮಾಣವಚನ ಸ್ವೀಕಾರ
  • ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ
  • ಡಿಕೆ ಜೊತೆ ಇತರ 13 ಜನರಿಗೆ ಕ್ಯಾಬಿನೆಟ್​ ಸ್ಥಾನ!
ಬೆಂಗಳೂರು: ಬುಧವಾರ (ಜೂ.3) ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್​ ಅಧಿಕಾರ ಸ್ವೀಕರಿಸಿದ್ದಾರೆ.
ಇಂದು ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಸಂಜೆ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಡಿ.ಕೆ. ಶಿವಕುಮಾರ್​ ಅವರಿಗೆ ಪ್ರಮಾಣವಚನ ಬೋಧಿಸಿದರು. ಮುಖ್ಯಮಂತ್ರಿ ಕುರ್ಚಿ ಏರಿದ ನಂತರ ಡಿ.ಕೆ.ಶಿವಕುಮಾರ್ ತಮ್ಮ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ (L.K. Ateeq Appointed as Economic Advisor to CM D.K. Shivakumar) ಅವರನ್ನು ನೇಮಿಸಿಕೊಂಡಿದ್ದಾರೆ. ಈ ಸಂಬಂಧ ಬುಧವಾರ (ಜೂ.3) ಆದೇಶ ಹೊರಡಿಸಲಾಗಿದೆ.
ಇನ್ನು ​ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ತುಷಾರ್ ಗಿರಿ ನಾಥ್ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಇದರೊಂದಿಗೆ, ತುಷಾರ್ ಗಿರಿ ನಾಥ್ ಅವರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜಂಟಿ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ.
ಉಪಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಚೋಳನ್. ಪಿ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಈ ಹುದ್ದೆಯಲ್ಲಿದ್ದ ಕಾವೇರಿ ಬಿ.ಬಿ. ಅವರನ್ನು ವರ್ಗಾವಣೆ ಮಾಡಲಾಗಿದೆ. ಜತೆಗೆ, ರಾಜೇಂದ್ರ ಚೋಳನ್ ಅವರಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದ್ದು, ಈ ಜವಾಬ್ದಾರಿಯಿಂದ ಗೌರವ್ ಗುಪ್ತಾ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇತರೆ 13 ಜನಕ್ಕೆ ಕ್ಯಾಬಿನೆಟ್​ ಸ್ಥಾನ!

ಡಿ.ಕೆ. ಶಿವಕುಮಾರ್​ ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರೆ ಇವರ ಜೊತೆ ಡಾ. ಜಿ. ಪರಮೇಶ್ವರ್​ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಥಮ ಕ್ಯಾಬಿನೆಟ್​ ಸಚಿವರಾಗಿ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ, ಭೈರತಿ ಸುರೇಶ್ ಮತ್ತು ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net