2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 134ರಂತೆ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು, ಈ ಆದೇಶದ ಅನುಬಂಧದಲ್ಲಿ ವಿವರಿಸಿರುವ ಚುನಾವಣೆಯ ರೀತಿ-ನೀತಿ ಹಾಗೂ ನಿಯಮಾವಳಿಗೊಳಪಟ್ಟು ಶಿಕ್ಷಣ ಸಂಸ್ಥೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರವು ಅನುಮತಿಸಿ ಆದೇಶಿಸಿದೆ ಎಂದು ಉನ್ನತ ಶಿಕ್ಷಣ ಇಲಾಖೆ (ಕಾಲೇಜು ಶಿಕ್ಷಣ & ಸಮನ್ವಯ) ಸರ್ಕಾರದ ಉಪ ಕಾರ್ಯದರ್ಶಿ ದಯಾನಂದ ಎಂ. ಸುತ್ತೋಲೆ ಹೊರಡಿಸಿದ್ದಾರೆ.