ಬೆಂಗಳೂರಿನ ವಕೀಲ ಸೋಮಶೇಖರ್ ರಾಜವಂಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ನೇತೃತ್ವದ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಕೇಂದ್ರ ಗೃಹ ಇಲಾಖೆಯ ಆದೇಶದಲ್ಲಿ ವಂದೇ ಮಾತರಂ ಗೀತೆ ಹಾಡಬಹುದು ಎಂಬ ಪದ ಬಳಕೆ ಮಾಡಲಾಗಿದ್ದು, ಅದು ಕಡ್ಡಾಯವಲ್ಲ ಎಂಬುದನ್ನು ಸೂಚಿಸುತ್ತದೆ. ಅಲ್ಲದೇ, ಈಚೆಗೆ ಸುಪ್ರೀಂ ಕೋರ್ಟ್ ಇಂಥದ್ದೇ ಮನವಿ ಒಳಗೊಂಡಿದ್ದ ಪಿಐಎಲ್ ವಜಾಗೊಳಿಸಿದೆ ಎಂದರು.