ತಿಪಟೂರಿನಲ್ಲಿ ಭೀಕರ ಅಪಘಾತ: ನಡೆದು ಹೋಗುತ್ತಿದ್ದ ಯುವತಿಗೆ ಗುದ್ದಿದ ಲಾರಿ; ಸಿಸಿಟಿವಿ ವಿಡಿಯೋ ನೋಡಿ ಬೆಚ್ಚಿಬಿದ್ದ ನೆಟ್ಟಿಗರು! Tiptur Accident Viral Video
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಕ್ಕಿ ಹೊಡೆದ ಲಾರಿ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಕ್ಕಿ ಹೊಡೆದ ಲಾರಿ
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದ ಘಟನೆ
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಸಿಸಿಟಿವಿ ದೃಶ್ಯ
ತಿಪಟೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ (Tiptur Accident Viral Video) ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ಈಗ ಸೋಷಿಯಲ್ ಮೀಡಿಯಾನಲ್ಲಿ ವೈರಲ್ ಆಗುತ್ತಿದೆ.
ಒಮ್ಮೆಲೆ ಲಾರಿ ಡಿಕ್ಕಿ ಹೊಡೆದರೂ ಯುವತಿ ಪ್ರಾಣಾಪಾಯದಿಮದ ಪಾರಾಗಿದ್ದಾಳೆಂದು ಹೇಳಲಾಗುತ್ತಿದ್ದು, ಸದ್ಯ ಈಕೆಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಾಹಿತಿ ಪ್ರಕಾರ, ಈ ಘಟನೆಯು ಸೋಮವಾರ (ಜು.6) ರಂದು ತಿಪಟೂರಿನ ಐಬಿ ಸರ್ಕಲ್ ಬಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.
ಲಾರಿ ಡಿಕ್ಕಿ ಹೊಡೆಯುತ್ತಿದ್ದಂತೆ ಯುವತಿ ನೆಲಕ್ಕೆ ಬಿದ್ದಿದ್ದಾಳೆ. ಆದರೆ ಇಕೆ ಲಾರಿಯ ಟೈರ್ಗಳ ಮಧ್ಯದಲ್ಲಿರುವ ಖಾಲಿ ಜಾಗದಲ್ಲಿ ಸಿಲುಕಿದ ಕಾರಣ ಬದುಕುಳಿದಿದ್ದಾಳೆ ಎನ್ನುವುದು ಪ್ರತ್ಯಕ್ಷದರ್ಶಿಗಳ ಮಾತಾಗಿದೆ.
ತಕ್ಷಣ ಇಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ. ಇನ್ನೊಂದು ಕಡೆ ತಿಪಟೂರು ಪೊಲೀಸರು ಲಾರಿ ಚಾಲಕನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಈ ವಿಡಿಯೋ ಸೋಷಿಯಲ್ ಮೀಡಿಯಾನಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಮೆಂಟ್ ಬಾಕ್ಸ್ ತುಂಬಿಸುವ ಕೆಲಸಕ್ಕೆ ಇಳಿದಿದ್ದಾರೆ. ಆ ಲಾರಿ ಚಾಲಕನಿಗೆ ಸರಿಯಾದ ಶಿಕ್ಷೆ ಆಗಬೇಕು. ಸುಮ್ಮನೆ ನಡೆದುಕೊಂಡು ಹೋಗುತ್ತಿರುವ ಪಾದಾಚಾರಿಗಳ ಮೇಲೆ ಈ ರೀತಿಯ ಅತ್ಯಾಚಾರ ಖಂಡನಾರ್ಹ ಎಂದು ಒಬ್ಬ ಬಳಕೆದಾರ ಹೇಳಿದ್ದಾರೆ.
ಫುಟ್ಪಾತ್ ವ್ಯವಸ್ಥೆ ಸರಿ ಇದ್ದರೆ ಆಕೆ ರಸ್ತೆ ಬದಲು ಫುಟ್ಪಾತ್ ಮೇಲೆ ಸಾಗುತ್ತಿದ್ದಳು. ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್ಪಾತ್ ಒತ್ತುವರಿ ನಿರ್ಮೂಲನೆ ಕಾರ್ಯ ನಮ್ಮಲ್ಲೂ ಆಗಬೇಕೆಂದು ಇನ್ನೊಬ್ಬರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ, (ಏಜನ್ಸೀಸ್).