ಭಾರತವು ವಿಶ್ವದಲ್ಲೇ ಎರಡನೇ ಅತಿದೊಡ್ಡ ಮೀನು ಉತ್ಪಾದಕ ರಾಷ್ಟ್ರವಾಗಿದ್ದರೂ, ಸಣ್ಣ ಮೀನುಗಾರರು ಮತ್ತು ಮೀನು ಕೃಷಿಕರು - ಸಂಸ್ಕರಣೆ, ಬ್ರ್ಯಾಂಡಿಂಗ್, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಸಂಪರ್ಕದ ಕೊರತೆಯಿಂದಾಗಿ ಸಮರ್ಪಕ ಆದಾಯ ಗಳಿಸಲು ಸಾಧ್ಯವಾಗುತ್ತಿಲ್ಲ. ಈ ಸವಾಲುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಎಫ್ಡಿಸಿ ಸಮುದಾಯ ಆಧಾರಿತ ಉದ್ಯಮಗಳನ್ನು ಬಲಪಡಿಸಲು ಕೌಶಲ್ಯಾಭಿವೃದ್ಧಿ, ಪ್ರಾಯೋಗಿಕ ತರಬೇತಿ ಹಾಗೂ ಅತ್ಯಾಧುನಿಕ ಮೀನು ಸಂಸ್ಕರಣಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಜೊತೆಗೆ, ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಮಾದರಿಯ ಮೌಲ್ಯವರ್ಧಿತ ಸಮುದ್ರಾಹಾರ ಉತ್ಪನ್ನಗಳ ಅಭಿವೃದ್ಧಿಗೂ ಉತ್ತೇಜನ ನೀಡುತ್ತಿದೆ.