ಈಗಾಗಲೇ ಎರಡು ಬಾರಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮೊದಲ ಬಾರಿ ಶಾಲಾ ಪರೀಕ್ಷೆ ಸಮಯ ಮತ್ತು ಎರಡನೇ ಬಾರಿ ಜನಗಣತಿ ಉದ್ದೇಶದಿಂದ ಮುಂದೂಡಲಾಗಿತ್ತು.
ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಜನಗಣತಿ ಕಾರ್ಯವು ಮೇ 16ರೊಳಗೆ ಮುಗಿಯುವುದರಿಂದ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ
ಪರೀಕ್ಷೆಗಳು ಮೇ 26ರಿಂದ 30ರವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿವೆ.
ಬೆಂಗಳೂರು: ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡುವ ಅರ್ಹತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಮೇ 26ರಿಂದ 30ರವರೆಗೆ ಪರೀಕ್ಷೆ ನಡೆಯಲಿದೆ.
ಈಗಾಗಲೇ ಎರಡು ಬಾರಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮೊದಲ ಬಾರಿ ಶಾಲಾ ಪರೀಕ್ಷೆ ಸಮಯ ಮತ್ತು ಎರಡನೇ ಬಾರಿ ಜನಗಣತಿ ಉದ್ದೇಶದಿಂದ ಮುಂದೂಡಲಾಗಿತ್ತು.
ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಜನಗಣತಿ ಕಾರ್ಯವು ಮೇ 16ರೊಳಗೆ ಮುಗಿಯುವುದರಿಂದ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸೂರಳ್ಕರ್ ತಿಳಿಸಿದ್ದಾರೆ.
ಪರೀಕ್ಷೆಗಳು ಮೇ 26ರಿಂದ 30ರವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿವೆ.
ಪ್ರವೇಶ ಪತ್ರಗಳನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ದಾಖಲಿಸಿ ಪರೀಕ್ಷಾ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದು. ಪ್ರವೇಶ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸಲಾಗಿದೆ.
ವೇಳಾಪಟ್ಟಿ
ಮೇ 26ಕನ್ನಡ, ಉರ್ದು, ಗಣಿತ, ಜೀವಶಾಸ, ಇಂಗ್ಲಿಷ್, ಸಂಸ್ಕೃತ