ಡಿಸಿಎಂ ಪುತ್ರಿಗೆ ಹೆಣ್ಣು ಮಗು ಜನನ; ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್.. DK Shivakumar
DK Shivakumar
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ತಾತನಾದ ಖುಷಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್
ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ
ಎಸ್ಎಂ ಕೃಷ್ಣ ಅವರ ಹುಟ್ಟು ಹಬ್ಬದ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಐಶ್ವರ್ಯಾ
ಬೆಂಗಳೂರು: ಕರ್ನಾಟಕದ ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ರ(DK Shivakumar ) ಪುತ್ರಿ ಐಶ್ವರ್ಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅವರು ಎಕ್ಸ್ನಲ್ಲಿ ಹಂಚಿಕೊಂಡು ಮಗುವಿಗೆ ಹಾರೈಸಿದ್ದಾರೆ.
ಮೇ.1ರಂದು ಮಾಜಿ ಸಿಎಂ ಎಸ್ಎಂ ಕೃಷ್ಟ(SM Krishana) ಅವರ ಜನ್ಮದಿನ ಆ ದಿನದಂದೇ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ ಹಾಗೂ ಐಶ್ವರ್ಯಾ ದಂಪತಿಗೆ ಹೆಣ್ಣು ಮಗು ಜನಿಸಿರುವುದು ಎರಡು ಕುಟುಂಬಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.
ಎಸ್ಎಂ ಕೃಷ್ಣ ಜನ್ಮದಿನದಂದೇ ಹುಟ್ಟಿದಬ್ಬ
ಶುಕ್ರವಾರ ಕಾರ್ಮಿಕರ ದಿನಾಚರಣೆ ಸರ್ಕಾರಿ ರಜೆ ಮಧ್ಯೆ ಡಿಕೆ ಶಿವಕುಮಾರ್ ಅವರಿಗೆ ನಾನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅನಿವಾರ್ಯವಿತ್ತು. ಈ ಮಧ್ಯೆ ಅವರಿಗೆ ಕರೆ ಮಾಡಿ ಮಗಳಿಗೆ ಮಗುವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ.
ಎಕ್ಸ್ನಲ್ಲಿ ತೇಜಸ್ವಿ ಸೂರ್ಯ ಪೋಸ್ಟ್
ಇವತ್ತು ಡಿಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ.ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು.
ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ತಾತನಾದ ಡಿ ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಡಿಕೆ ಶಿವಕುಮಾರ್ ಅವರು, ತಮ್ಮ ಮಗಳ ಮಗುವನ್ನು ಕಾಣಲು ಆಸ್ಪತ್ರೆಗೆ ಭೇಟಿ ನೀಡುವ ಮುನ್ನ, ಬೆಂಗಳೂರಿನ ಪ್ರಮುಖ ರಸ್ತೆಗಳಾದ ಎಂಜಿ ರಸ್ತೆ, ಟ್ರಿನಿಟಿ ಮತ್ತು ಅನಿಲ್ ಕುಂಬ್ಳೆ ವೃತ್ತದಲ್ಲಿ ನಮ್ಮ ಮೆಟ್ರೋ ಕಂಬಗಳ ಮೇಲೆ ಅಳವಡಿಸಲಾದ ಡೈನಾಮಿಕ್ ಲೈಟಿಂಗ್ ಅನ್ನು ಶಿವಕುಮಾರ್ ಉದ್ಘಾಟಿಸಿದರು, (ಏಜೆನ್ಸೀಸ್).