ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. "ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಶಿಷ್ಟಾಚಾರದ ಮೂಲಕ ಅವರನ್ನು ನಾನು ಸ್ವಾಗತಿಸಿ, ಭೇಟಿ ಮಾಡಿದ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ? ನೀವುಗಳು ನಿಮಗೆ ಇಚ್ಛೆ ಬಂದಂತೆ ಗೊಂದಲ ಸೃಷ್ಟಿಸಿಕೊಳ್ಳುತ್ತಿದ್ದೀರಿ. ನಾವು ಯಾವ ಸಂದೇಶವನ್ನು ಕೊಟ್ಟಿಲ್ಲ. ನಮಗೂ ಯಾವ ಸಂದೇಶವನ್ನೂ ಕೊಟ್ಟಿಲ್ಲ. ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ಇದನ್ನೇ ಮುಂದುವರಿಸಿಕೊಂಡು ಹೋಗಿ ಎಂದು ನಮ್ಮ ನಾಯಕರು ಹೇಳಿದ್ದಾರೆ. ನರೇಗಾ ವಿಚಾರವಾಗಿ ನಾವು ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ರಾಜಕಾರಣ ಚರ್ಚೆ ಮಾಡಿದ್ದೇವೆ.