2002ರಲ್ಲಿ ಸಂಜಯ್ ಲೀಲಾ ಬನ್ಸಾಲಿ ಅವರ ದೇವದಾಸ್ ಚಿತ್ರದ ಮೂಲಕ ಬಾಲಿವುಡ್ಗೆ ಪದಾರ್ಪಣೆ ಮಾಡಿದ ಶ್ರೇಯಾ, ತಮ್ಮ ಮೊದಲ ಚಿತ್ರದ ಹಾಡಿಗೇ ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಅಂದಿನಿಂದ ಇಂದಿನವರೆಗೆ ಹಿಂದಿ ಸೇರಿದಂತೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಬಂಗಾಳಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿ ಭಾರತದ ಅತ್ಯಂತ ಯಶಸ್ವಿ ಗಾಯಕಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಅವರಿಗೆ ಈವರೆಗೆ 5 ರಾಷ್ಟ್ರ ಪ್ರಶಸ್ತಿಗಳು ಹಾಗೂ ಹಲವಾರು ಫಿಲ್ಮ್ ಫೇರ್ ಪ್ರಶಸ್ತಿಗಳು ಲಭಿಸಿವೆ.