ವ್ಯವಹಾರದಲ್ಲಿ ಜಾಗರೂಕತೆ ಅಗತ್ಯ

gan
Published on

ಕುಂದಾಪುರ: ಈ ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ಅತ್ಯಂತ ಜಾಗೃತರಾಗಬೇಕು. ಇಲ್ಲದಿದ್ದಲ್ಲಿ ಗ್ರಾಹಕರು ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಒಂದಿಷ್ಟು ಜಾಗೃತೆ ವಹಿಸಿದಲ್ಲಿ ಆನ್‌ಲೈನ್‌ನಿಂದಾಗುವ ಮೋಸಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಕರ್ಣಾಟಕ ಬ್ಯಾಂಕ್‌ನ ಕ್ಲಸ್ಟರ್ ಮುಖ್ಯಸ್ಥ ವಿಷ್ಣುಮೂರ್ತಿ ಉಪಾಧ್ಯಾಯ ಹೇಳಿದರು.

ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಆಶ್ರಯದಲ್ಲ್ಲಿ ಕರ್ಣಾಟಕ ಬ್ಯಾಂಕ್ ಸಹಯೋಗದೊಂದಿಗೆ ಶನಿವಾರ ಬ್ಯಾಂಕಿಂಗ್ ಮತ್ತು ಸೈಬರ್ ಕ್ರೈಮ್ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕರ್ಣಾಟಕ ಬ್ಯಾಂಕ್ ಹಂಗಳೂರು ಶಾಖೆ ಪ್ರಬಂಧಕ ಪ್ರಮೋದ ಕುಲಕರ್ಣಿ, ಆಂತರಿಕ ಗುಣಮಟ್ಟ ಭರವಸಾ ಕೋಶ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಮತ್ತು ವಿದ್ಯಾರ್ಥಿ ಪ್ರತಿನಿಧಿ ನಾಗರಾಜ ಸೋಮಯ್ಯ ನಾಯ್ಕ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಶೇಖರ ಬಿ. ಪ್ರಸ್ತಾವನೆಗೈದರು. ವಿದ್ಯಾರ್ಥಿನಿಯರಾದ ಅಮೃತಾ ವಂದಿಸಿದರು. ದಿವ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net