More

    39ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಹೋರಾಟ: ಜಿಲ್ಲಾ ರೈತ ಹಿತರಕ್ಷಣಾ ಸಮಿತಿಗೆ ಸಂಘಟನೆಗಳ ಬೆಂಬಲ

    ಮಂಡ್ಯ: ಕಾವೇರಿ ಕಣಿವೆ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 39ನೇ ದಿನ ಪೂರೈಸಿತು.
    ನಗರದ ಸರ್‌ಎಂವಿ ಪ್ರತಿಮೆ ಎದುರು ಸಮಿತಿ ನಡೆಸುತ್ತಿರುವ ಹೋರಾಟದಲ್ಲಿ ಭಾಗವಹಿಸಿದ ವಿವಿಧ ಸಂಘಟನೆಗಳು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದೆಲ್ಲೆಡೆ ಹೋರಾಟ ನಡೆಯುತ್ತಿದ್ದರೂ, ರಾಜ್ಯ ಸರ್ಕಾರ ಮಾತ್ರ ತ.ನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿಲ್ಲ. ಈ ನಡುವೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಮತ್ತೆ 15 ದಿನ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿರುವುದು ಖಂಡನೀಯ. ಈ ಆದೇಶವನ್ನು ರಾಜ್ಯಸರ್ಕಾರ ತಿರಸ್ಕರಿಸಬೇಕು. ಜಲಾಶಯಗಳಿಂದ ಹರಿಸುತ್ತಿರುವ ನೀರನ್ನು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದರು.
    ಚುನಾಯಿತ ಜನಪ್ರತಿನಿಧಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರ ತನ್ನ ಹೊಣೆಯನ್ನು ಸಮರ್ಥವಾಗಿ ನಿರ್ವಹಣೆ ಮಾಡದಿರುವುದರಿಂದ ಕರ್ನಾಟಕಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕುಡಿಯುವ ನೀರನ್ನು ಸಹ ಉಳಿಸಿಕೊಳ್ಳುತ್ತಿಲ್ಲ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಯಾವುದೇ ಆದೇಶ ಬಂದರೂ ರೈತರ ಹಿತ ಕಾಪಾಡುವುದಾಗಿ ಹೇಳಿದ್ದಾರೆ. ಆದರೆ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಮಾತ್ರ ನಿಲ್ಲಿಸಿಲ್ಲ. ಹೀಗಿರುವಾಗ ಇನ್ಯಾವ ರೀತಿ ಹಿತ ಕಾಪಾಡುತ್ತಾರೆ ಎಂದು ಪ್ರಶ್ನಿಸಿದರು.
    ಪ್ರತಿಭಟನೆಯಲ್ಲಿ ಸಮಿತಿಯ ಸಂಘಟನಾ ಸಂಚಾಲಕಿ ಸುನಂದಾ ಜಯರಾಂ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಕೃಷ್ಣಪ್ರಕಾಶ್, ಕೆ.ಎಸ್.ಸುಧೀರ್‌ಕುಮಾರ್, ಫಯಾಜ್, ಹುರುಗಲವಾಡಿ ರಾಮಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts