More

    46ನೇ ಕಾಲಿಟ್ಟ ಕಾವೇರಿ ಹೋರಾಟ: ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆಗೆ ಬೆಂಬಲ

    ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ 45ನೇ ದಿನ ಪೂರೈಸಿತು.
    ನಗರದ ಸರ್‌ಎಂವಿ ಪ್ರತಿಮೆ ಎದುರು ನಿರಂತರ ಧರಣಿ ಮುಂದುವರಿಸಿದ ಸಮಿತಿಯ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು ಹೋರಾಟಕ್ಕೆ ಬೆಂಬಲ ಸೂಚಿಸಿದರು.
    ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ಮಾತನಾಡಿ, ಕಾವೇರಿ ನೀರಿನ ವಿಚಾರವನ್ನು ಆಳುವ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಚುನಾಯಿತ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಮುನ್ನಡೆಯಲು ಮುಂದಾಗಿಲ್ಲ. ಹೋರಾಟಗಾರರ ಜೊತೆಗೆ ಮಾತುಕತೆ ನಡೆಸುತ್ತಿಲ್ಲ. ವಿಧಾನಮಂಡಲದ ವಿಶೇಷ ಜಂಟಿ ಅಧಿವೇಶನವನ್ನು ಕರೆಯಬೇಕು. ಅಂತೆಯೇ ಅಧಿವೇಶನದಲ್ಲಿ ಕಾವೇರಿ ವಿಚಾರವಾಗಿ ಸಮಗ್ರ ಚರ್ಚೆ ನಡೆಸಿ ಒಮ್ಮತದ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಮುಂದಾಗಬೇಕು. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಅದೇ ರೀತಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಸಹ ಮಲತಾಯಿ ಧೋರಣೆ ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಚಳವಳಿಯನ್ನು ತೀವ್ರಗೊಳಿಸಲು ನಿರ್ಧಾರ ಮಾಡಿದ್ದೇವೆ. ಅ.20ರಿಂದ ಒಂದೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರು ಹಾಗೂ ನೂರಾರು ಜನರು ಭಾಗವಹಿಸಲಿದ್ದಾರೆ. ಇವರ ಜತೆಗೆ ಮಂಡ್ಯ ನಗರದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಹೋರಾಟ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
    ಪ್ರತಿಭಟನೆಯಲ್ಲಿ ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಕೃಷ್ಣಪ್ರಕಾಶ್, ಕನ್ನಡಪರ ಸಂಘಟನೆಯ ನಾರಾಯಣ್, ಕೋಮಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts