Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಕಾವೇರಿಗಾಗಿ ಪ್ರಧಾನಿಗೆ ತ.ನಾಡು ಮೊರೆ

Friday, 23.02.2018, 3:04 AM       No Comments

ಚೆನ್ನೈ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಕೂಡಲೇ ರಚಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಪಳನಿಸಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಪ್ರಧಾನಿ ಭೇಟಿ ಮಾಡಲಿರುವ ನಿಯೋಗದಲ್ಲಿ ಸರ್ವಪಕ್ಷಗಳ ಶಾಸಕರು, ಸಂಸದರು, ರೈತ ಮುಖಂಡರು ಹಾಗೂ ಕಾನೂನು ತಜ್ಞರು ಇರಲಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ತಮಿಳುನಾಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನೀಡಿರುವ ಎಲ್ಲ ನಿರ್ದೇಶನಗಳನ್ನು ಕೂಡಲೇ ಜಾರಿ ಮಾಡಬೇಕು. ಪ್ರಾಧಿಕಾರವನ್ನು 6 ವಾರದೊಳಗೆ ರಚಿಸಬೇಕು ಎನ್ನುವುದು ಸಭೆಯ ಪ್ರಮುಖ ನಿರ್ಣಯವಾಗಿದೆ. ಕಾನೂನು ಹೋರಾಟ ನಡೆಸುವ ಬಗೆಗೂ ತಜ್ಞರೊಂದಿಗೆ ರ್ಚಚಿಸಿ ಮುಂದಿನ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರ ನೀಡಲಾಗಿದೆ.

Leave a Reply

Your email address will not be published. Required fields are marked *

Back To Top