More

    ಸಮುದ್ರಕ್ಕೆ ಹರಿಸಿ ಕಾವೇರಿ ನೀರು ಪೋಲು

    ಚಿಕ್ಕಮಗಳೂರು: ತಮಿಳುನಾಡು ಸರ್ಕಾರ ಕಾವೇರಿ ನೀರನ್ನು ಸಮುದ್ರಕ್ಕೆ ಹರಿಸುವ ಮೂಲಕ ಪೋಲು ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕನ್ನಡ ಸೇನೆ ಮುಖಂಡರು ನಗರದ ಹನುಮಂತಪ್ಪ ವೃತ್ತದಲ್ಲಿ ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
    ನಗರದ ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಮುಖಂಡರು ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
    ಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಮಾತನಾಡಿ, ರಾಜ್ಯದ ರೈತಾಪಿ ವರ್ಗ ಬೆಳೆ ಬೆಳೆಯಲು ಹಾಗೂ ಕುಡಿಯುವ ನೀರಿಗಾಗಿ ಕಾವೇರಿ ನೀರನ್ನು ಅವಲಂಬಿಸಿದೆ. ಇದರ ನಡುವೆ ನೀರನ್ನು ಸಮುದ್ರಕ್ಕೆ ಬಿಡುತ್ತಿರುವ ವೀಡಿಯೋವನ್ನು ತಮಿಳುನಾಡಿನ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಸರ್ಕಾರದ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ.
    ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ತಮಿಳುನಾಡು ಮೂಲದ ನಿವಾಸಿಗಳು ಕಾವೇರಿ ನೀರನ್ನು ಕುಡಿಯುವುದಕ್ಕೆ ಬಳಸುವ ಬದಲು ಸಮುದ್ರಕ್ಕೆ ಹರಿಸುತ್ತಿರುವುದಕ್ಕೆ ಕನ್ನಡಿಗರು ಸೇರಿದಂತೆ ಸ್ಥಳೀಯ ತಮಿಳರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೂಡಲೇ ತಮಿಳುನಾಡು ಸರ್ಕಾರ ನೀರನ್ನು ಪೋಲು ಮಾಡುವುದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
    ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಡುವೆಯೂ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದನ್ನು ತಮಿಳುನಾಡಿನ ಸರ್ಕಾರ ಜನಸಾಮಾನ್ಯರಿಗೆ ಕುಡಿಯಲು ಬಳಸದೇ ಸಮುದ್ರಕ್ಕೆ ಹರಿಸುವ ಮೂಲಕ ವ್ಯರ್ಥ ಮಾಡಲಾಗುತ್ತಿದೆ ಎಂದು ದೂರಿದರು.
    ರಾಜ್ಯದಲ್ಲಿ ಬರಗಾಲ ಆವರಿಸಿ ಹಲವಾರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಿದ್ದು ಇದರ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂಬರುವ ಲೋಕಸಭೆ ಚುನಾವಣೆ ಮುಂದಿಟ್ಟು ತಮಿಳುನಾಡಿಗೆ ಪ್ರವಾಸ ಕೈಗೊಳ್ಳುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
    ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕೂಡಾ ಕಾವೇರಿ ನೀರಿನ ಸಂಬಂಧ ತೀವ್ರ ಸಮಸ್ಯೆಯೊಡ್ಡಿದ್ದರು. ಇದೀಗ ಸ್ಟಾಲಿನ್ ಅವರು ಮತ್ತೆ ಕಾವೇರಿ ಸಂಬಂಧ ಸಮಸ್ಯೆಯೊಡ್ಡುವ ಮೂಲಕ ಜನತೆ ಬದುಕಿನಲ್ಲಿ ಆಟವಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts