ಕಲ್ಕತ್ತಾ: ರಾಷ್ಟ್ರವ್ಯಾಪಿ ತೀವ್ರ ಗದ್ದಲವನ್ನು ಹುಟ್ಟು ಹಾಕಿರುವ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಪ್ರಕರಣದ ಆರಂಭದಲ್ಲಿ ತನಿಖೆ ನಡೆಸಿದ ಪೊಲೀಸ್ ಅಧಿಕಾರಿ ಅಭಿಜಿತ್ ಮೊಂಡಲ್ರನ್ನು ಸಿಬಿಐ ಬಂಧಿಸಿದೆ.
ಬಂಧಿತರು ತನಿಖಾಧಿಕಾರಿಗಳ ದಾರಿ ತಪ್ಪಿಸಲು ಮತ್ತು ಸಾಕ್ಷ್ಯವನ್ನು ಮರೆಮಾಚಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಇನ್ಮುಂದೆ ಅಫ್ಘಾನಿಸ್ತಾನದಲ್ಲಿ ಕ್ರಿಕೆಟ್ ಬ್ಯಾನ್; ಜಂಟಲ್ಮ್ಯಾನ್ ಗೇಮ್ಗೆ ಬ್ರೇಕ್ ಹಾಕಲು ಹೀಗಿದೆ ಕಾರಣ
ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು. ಈ ಆರೋಪದ ಮೇಲೆ ಸೆಪ್ಟೆಂಬರ್ 2 ರಂದು ಘೋಷ್ ಅವರನ್ನು ವಶಕ್ಕೆ ಪಡೆದಿತ್ತು.
ಪ್ರಕರಣದಲ್ಲಿ ತಲಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಿಬಿಐ ಬಂಧಿಸಿದೆ. ಎಫ್‌ಐಆರ್ ದಾಖಲಿಸಲು ವಿಳಂಬ, ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪ ಇವರ ಮೇಲಿದೆ. ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದೆ.