More

    ಪ್ರಶ್ನೆಗಾಗಿ ಹಣ ಪಡೆದ ಆರೋಪ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

    ನವದೆಹಲಿ: ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪದ ಸಂಬಂಧ ತೃಣಮೂಲ ಕಾಂಗ್ರೆಸ್​ನ ಮಾಜಿ ಸಂಸದೆ ಮಹುತಾ ಮೊಯಿತ್ರಾ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲು

    ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಾದ ಲೋಕಪಾಲ್​ ಪ್ರಕರಣದ ತನಿಖೆ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಹೇಳಿದ ನಂತರ ಟಿಎಂಸಿ ನಾಯಕಿ ವಿರುದ್ಧ ಶುಕ್ರವಾರ ಎಫ್​ಐಆರ್​ ದಾಖಲಿಸಿತ್ತು.

    ಶನಿವಾರ ಬೆಳಗ್ಗೆ ಮಹುತಾ ಮೊಯಿತ್ರಾ ಅವರ ಕೋಲ್ಕತ್ತಾದಲ್ಲಿರುವ ನಿವಾಸ ಮತ್ತು ಕಚೇರಿ ಸೇರಿದಂತೆ ದೆಹಲಿ ಕಚೇರಿ ಮೇಲೆಯೂ ಮೊಯಿತ್ರಾ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ದಾಖಲು ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
    ಪ್ರಕರಣವನ್ನು ಎಲ್ಲಾ ರೀತಿಯಲ್ಲಿ ತನಿಖೆ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ಸಿಬಿಐಗೆ ನಿರ್ದೇಶಿಸಿದೆ.

    ಈ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಸದನದ ನೀತಿ ಸಮಿತಿ, ಮಹುವಾ ಅವರನ್ನು ಉಚ್ಚಾಟಿಸಬೇಕು ಎಂದು ವರದಿ ನೀಡಿತ್ತು. ಕಳೆದ ವರ್ಷ ಡಿಸೆಂಬರ್‌ 8 ರಂದು ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

    ಮಾಜಿ ಸಂಸದೆ ಮೊಯಿತ್ರಾ ತನ್ನ ಉಚ್ಚಾಟನೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. 2024 ಸಾರ್ವತ್ರಿಕ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಕೃಷ್ಣಾನಗರ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯಲಿದ್ದಾರೆ. ಮತ್ತೆ ಮಹುವಾ ಅವರಿಗೆ ಟಿಎಂಸಿ ಟಿಕೆಟ್ ನೀಡಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಮಾಡಿದ ಆರೋಪಗಳ ಪ್ರಾಥಮಿಕ ತನಿಖೆಯ ವರದಿ ಬಂದ ನಂತರ ಭ್ರಷ್ಟಾಚಾರ ವಿರೋಧಿ ಓಂಬುಡ್ಸ್‌ಮನ್ ಲೋಕಪಾಲ್ ಅವರು ಸಿಬಿಐಗೆ ನಿರ್ದೇಶನಗಳನ್ನು ನೀಡಿದ್ದಾರೆ.

    ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರರ ಮೇಲೆ ದಾಳಿ ಮಾಡಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ಉಡುಗೊರೆಗಳ ವಿನಿಮಯಕ್ಕಾಗಿ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಲೋಕಸಭೆ ಸದಸ್ಯ ದುಬೆ ಆರೋಪ ಮಾಡಿದ್ದರು.

    ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಹೇಳಿಕೆ: ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts