More

    ವಂಚನೆ ಪ್ರಕರಣ; ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್

    ಬೆಂಗಳೂರು: ಬ್ಯಾಂಕ್​ವೊಂದಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ  ವಿರುದ್ಧ ಕೇಂದ್ರೀಯ ತನಿಖಾ ದಳ ಎಫ್‍ಐಆರ್ ದಾಖಲಿಸಿದೆ.

    ಎಂಜಿ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಶಿವರಾಮೇ ಗೌಡರು ಲೋನ್ ಪಡೆದಿದ್ದರು. ಇದೀಗ ಈ ಸಾಲದ ಹಣ ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವ ಕುರಿತು ಬ್ಯಾಂಕ್ ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ದೂರು ಸಲ್ಲಿಸಿದ್ದರು.

    ನಕಲಿ ದಾಖಲೆ ಸೃಷ್ಟಿಸಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಿಂದ 12.48 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ  ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿದೆ.

    ಆರೋಪಿಗಳು ಒಳಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದಾರೆ. ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆ. ನಂತರ ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂದು ಎಸ್​.ಡಿ.ಮೋದಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts