More

  ಲೋಕಸಭೆ ಚುನಾವಣೆ ಹೊತ್ತಲ್ಲೇ ಅಖಿಲೇಶ್‌ ಯಾದವ್‌ಗೆ ಸಿಬಿಐ ಸಮನ್ಸ್

  ಲಖನೌ: ಉತ್ತರ ಪ್ರದೇಶದಲ್ಲಿ ಮುನ್ನಡೆ ಸಾಧಿಸುವ ದಿಸೆಯಲ್ಲಿ ಇಂಡಿಯಾ ಒಕ್ಕೂಟದ (India Bloc) ಕಾಂಗ್ರೆಸ್‌ ಜತೆ ಸಮಾಜವಾದಿ ಪಕ್ಷವು ಮೈತ್ರಿ ಮಾಡಿಕೊಂಡಿದೆ. ಚುನಾವಣೆಗೆ ಈಗಾಗಲೇ ರಣತಂತ್ರ ರೂಪಿಸುತ್ತಿದೆ. ಇದರ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಅವರಿಗೆ ಸಿಬಿಐ ಸಮನ್ಸ್‌ (CBI Summons) ಜಾರಿ ಮಾಡಿದೆ. ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮನ್ಸ್‌ ನೀಡಿದೆ.

  ಅಕ್ರಮ ಗಣಿಕಾರಿಕೆ ಪ್ರಕರಣದಲ್ಲಿ ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ ಸಮನ್ಸ್‌ ಜಾರಿಗೊಳಿಸಿದೆ. ಫೆಬ್ರವರಿ 29ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ. ಹಾಗಾಗಿ, ಲೋಕಸಭೆ ಚುನಾವಣೆ ಗೆಲುವಿಗೆ ರಣತಂತ್ರ ರೂಪಿಸುತ್ತಿರುವ ಅಖಿಲೇಶ್‌ ಯಾದವ್‌ ಅವರಿಗೆ ಸಂಕಷ್ಟ ಎದುರಾಗಿದೆ. ಫೆಬ್ರವರಿ 29ರಂದು ಸಿಬಿಐ ವಿಚಾರಣೆಗೆ ಅಖಿಲೇಶ್‌ ಯಾದವ್‌ ಅವರು ಹಾಜರಾಗುತ್ತಾರೋ, ಇಲ್ಲವೋ ಎಂಬುದರ ಕುರಿತು ಇದುವರೆಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

  ಅಖಿಲೇಶ್‌ ಯಾದವ್‌ ಅವರು ಉತ್ತರ ಪ್ರೇದೇಶದ ಮುಖ್ಯಮಂತ್ರಿಯಾಗಿದ್ದಾಗ ಅಂದರೆ, 2012ರಿಂದ 2016ರ ಅವಧಿಯಲ್ಲಿ ಹಮೀರ್‌ಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ್ದಾರೆ ಎಂಬ ಆರೋಪವಿದೆ. ಅಲ್ಲದೆ, ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಗೆ ಅನುಮತಿ, ಅಕ್ರಮವಾಗಿ ಮರಳು ಸಾಗಣೆ ಮಾಡುವವರ ಪರವಾನಗಿ ನವೀಕರಣ ಸೇರಿ ಹಲವು ಆರೋಪಗಳು ಎದುರಾಗಿವೆ. ಹಾಗಾಗಿ, ಅಖಿಲೇಶ್‌ ಯಾದವ್‌ ಅವರಿಗೆ ಸಿಬಿಐ ಸಮನ್ಸ್‌ ನೀಡಿದೆ ಎಂದು ತಿಳಿದುಬಂದಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts