More

  ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದ ಮೇಲೆ ಸಿಬಿಐ ದಾಳಿ

  ಬಿಹಾರ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

  ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಪತ್ನಿ ರಾಬ್ರಿ ದೇವಿ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ. ಲಾಲು ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಮತ್ತು ಮಗಳು ಮಿಸಾ ಅವರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಪಾಟ್ನಾ, ಗೋಪಾಲ್‌ಗಂಜ್ ಮತ್ತು ದೆಹಲಿಯ 13 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಪತಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಇತರ 14 ಮಂದಿಯೊಂದಿಗೆ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

  ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ, ಅತ್ಯಂತ ಕಡಿಮೆ ಬೆಲೆಗೆ ಭೂಮಿ ನೀಡಿರುವವರಿಗೆ ಬದಲಾಗಿ ಕೆಲವು ಅನರ್ಹ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಾದ ಪ್ರಕರಣ ಇದಾಗಿದೆ.

  ಇದನ್ನೂ ಓದಿ: ಬೀದಿ ನಾಯಿ ಸಮಸ್ಯೆಗೆ ಪರಿಹಾರ: ಬೀದಿ ಬದಿಯ ಶ್ವಾನಗಳನ್ನು ಸೇವನೆಗಾಗಿ ಅಸ್ಸಾಂಗೆ ಕಳುಹಿಸಿ ಎಂದ ಶಾಸಕ

  ಬಿಹಾರದ ವಿವಿಧ ಭಾಗಗಳಲ್ಲಿನ ಪ್ರಧಾನ ಆಸ್ತಿಗಳನ್ನು ಯಾದವ್ ಕುಟುಂಬಕ್ಕೆ ಸಂಬಂಧಿಸಿದ ಕಂಪನಿಗಳು ಸ್ವಾಧೀನಪಡಿಸಿಕೊಂಡಿವೆ. ಸಿಬಿಐಗೆ ಕೆಲವು ಅಭ್ಯರ್ಥಿಗಳ ಸಾಕ್ಷ್ಯ ಸಿಕ್ಕಿದೆ. ಲಾಲು ಪ್ರಸಾದ್ ರೈಲ್ವೆ ಸಚಿವರಾಗಿದ್ದಾಗ, ಕೆಲವು ಜನರಿಗೆ ಉದ್ಯೋಗ ನೀಡಲು ಭೂಮಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

  ಮಹಾರಾಷ್ಟ್ರದ ಹೆದ್ದಾರಿಗೆ 200 ಮೀಟರ್ ವೆರೆಗೆ ಬಿದಿರಿನ ತಡೆಗೋಡೆ ನಿರ್ಮಾಣ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts