More

    ಪರೇಶ್​ ಮೇಸ್ತಾನದ್ದು ಹತ್ಯೆಯಲ್ಲ, ಆಕಸ್ಮಿಕ ಸಾವು: ಸಿಬಿಐ ವರದಿ

    ಉತ್ತರಕನ್ನಡ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣ ಇದೀಗ ಮತ್ತೊಂದು ಮಹತ್ವದ ಹಂತಕ್ಕೆ ತಲುಪಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೊನ್ನಾವರ ನ್ಯಾಯಾಲಯಕ್ಕೆ ಸೆಂಟ್ರಲ್ ಬ್ಯೂರೋ ಆಫ್ ಇನ್​ವೆಸ್ಟಿಗೇಷನ್​ (ಸಿಬಿಐ) ವರದಿ ಸಲ್ಲಿಸಿದೆ.

    2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ಗಲಭೆ ವೇಳೆ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಬಳಿಕ ಡಿಸೆಂಬರ್ 8ರಂದು ಹೊನ್ನಾವರದ ಶೆಟ್ಟಿಕೆರೆಯಲ್ಲಿ ಆತನ ಶವ ಪತ್ತೆಯಾಗಿತ್ತು. ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿಗರು ಆರೋಪಿಸಿದ್ದರು.

    ಈತನನ್ನು ಹಿಂದು ಸಂಘಟನೆಗಳು ಹಿಂದು ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಈ ಪ್ರಕರಣ ಕೋಮುಸಂಘರ್ಷಕ್ಕೆ ಕಾರಣವಾಗಿತ್ತು. ಪರಿಣಾಮವಾಗಿ ಅಂದಿನ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐದು ಜನರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಇಂದು ಸಿಬಿಐ ವರದಿ ಸಲ್ಲಿಸಿದೆ.

    ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಸಿಬಿಐ, ಪರೇಶ್ ಮೇಸ್ತಾನದ್ದು ಹತ್ಯೆಯಲ್ಲ ಆಕಸ್ಮಿಕ ಸಾವು ಎಂದು ಹೇಳಿದೆ. ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ವಿಚಾರಣೆಯನ್ನು ನವಂಬರ್ 16ಕ್ಕೆ ಮುಂದೂಡಿದೆ.

    ಕಾಂತಾರ: ಒಂದಕ್ಕೂ ನಾಲ್ಕಕ್ಕೂ ನಡುವೆ ಎಷ್ಟು ಅಂತರ!?; ಬದಲಾಯ್ತು ರಿಷಬ್ ‘ಸ್ಟೇಟಸ್​’

    ‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

    180 ಕೆ.ಜಿ. ತೂಕದ ವ್ಯಕ್ತಿ, ಧೋಖಾ ವ್ಯಕ್ತಿತ್ವ: ಖಾಕಿ ಧರಿಸಿ ಹಣ ವಸೂಲಿ ಮಾಡ್ತಿದ್ದ ನಕಲಿ ಇನ್​ಸ್ಪೆಕ್ಟರ್ ಅರೆಸ್ಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts