ಮಣಿಪುರ ಹಿಂಸಾಚಾರದ ತನಿಖೆ ಸಿಬಿಐ ತೆಕ್ಕೆಗೆ!

Untitled design - 2023-09-27T204458.539
Published on

ಇಂಫಾಲ್​: ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ವಯಸ್ಕರ ಕ್ರೂರ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಲು ಸಿಬಿಐ ತಂಡವು ನಾಳೆ ಮಣಿಪುರ ರಾಜಧಾನಿ ಇಂಫಾಲ್​ಗೆ ಭೇಟಿ ನೀಡಲಿದೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ತಡರಾತ್ರಿ​ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ.

ಅಪರಾಧಿಗಳನ್ನು ಬಂಧಿಸಲು ಕೇಂದ್ರದ ಜತೆಗೆ ತಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಜನತೆಗೆ ಭರವಸೆ ನೀಡಿದ್ದಾರೆ. ಮಣಿಪುರದಲ್ಲಿ ಅಪಹರಣಕ್ಕೊಳಗಾಗಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ್ದು, ಯುವಕರ ಮೃತದೇಹಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರಿಂದ ಮಂಗಳವಾರ ಇಂಫಾಲ್​ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರಿಂದ ಹಿಂಸಾಚಾರ ಭುಗಿಲೆದ್ದಿತ್ತು.

ಈ ಸಂದರ್ಭ ಪೊಲೀಸರು ಲಾಠಿಚಾರ್ಜ್​ ಮತ್ತು ಅಶ್ರುವಾಯು ಸಿಡಿಸಿದ್ದರಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ,(ಏಜೆನ್ಸೀಸ್). 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net