More

    ಸಿಬಿಎಸ್​ಇ : 12 ನೇ ತರಗತಿ ಪರೀಕ್ಷೆ ಮುಂದಕ್ಕೆ, 10ನೇ ತರಗತಿ ಪರೀಕ್ಷೆ ರದ್ದು

    ನವದೆಹಲಿ : ಮೇ ತಿಂಗಳಲ್ಲಿ ನಡೆಯಬೇಕಿದ್ದ ಸಿಬಿಎಸ್​ಇ ಬೋರ್ಡ್​ನ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

    ಬೋರ್ಡ್​ನ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜೂನ್ 1 ರಂದು ಪರಿಸ್ಥಿತಿಯನ್ನು ಪರಾಮರ್ಶಿಸಿ ಹೊಸ ದಿನಾಂಕಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಹೊಸ ಪರೀಕ್ಷಾ ದಿನಾಂಕವನ್ನು ಕನಿಷ್ಠ 15 ದಿನಗಳ ಕಾಲಾವಕಾಶ ನೀಡಿ ಘೋಷಿಸಲಾಗುವುದು ಎನ್ನಲಾಗಿದೆ.

    ಇದನ್ನೂ ಓದಿ: 10ನೇ ತರಗತಿ ಪಾಸಾದ ಮಹಿಳೆಯರಿಗೆ ಒಳ್ಳೇ ಅವಕಾಶ: ಗ್ರಾಮ ಪಂಚಾಯ್ತಿಗಳಲ್ಲಿ ನೇಮಕಾತಿ

    ಇನ್ನು, 10 ನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಸಿಬಿಎಸ್​ಇ ಬೋರ್ಡ್ ರೂಪಿಸಲಿರುವ ‘ಆಬ್ದೆಕ್ಟೀವ್ ಕ್ರೈಟೀರಿಯ’ದ ಆಧಾರದ ಮೇಲೆ ಫಲಿತಾಂಶವನ್ನು ಘೋಷಿಸಲಾಗುವುದು ಎನ್ನಲಾಗಿದೆ. ಈ ಪ್ರಕಾರವಾಗಿ ನೀಡಲಾಗುವ ಅಂಕಗಳ ಬಗ್ಗೆ ಅತೃಪ್ತಿ ಹೊಂದಿದ ಯಾವುದೇ ಅಭ್ಯರ್ಥಿಗೆ, ಪರೀಕ್ಷೆ ನಡೆಸಲು ಪೂರಕವಾದ ಸನ್ನಿವೇಶ ಸೃಷ್ಟಿಯಾದಾಗ ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ನೀಡಲಾಗುವುದು ಎನ್ನಲಾಗಿದೆ.

    ವಿವಿಧ ರಾಜ್ಯಗಳು ಮತ್ತು ವಲಯಗಳಿಂದ ಸಿಬಿಎಸ್​ಇ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಬೇಕೆಂಬ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ, ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಡನೆ ನಡೆಯುತ್ತಿರುವ ಸಮಾಲೋಚನಾ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. (ಏಜೆನ್ಸೀಸ್)

    ಕುಂಭ ಮೇಳ : ನಾಲ್ಕು ದಿನಗಳಲ್ಲಿ 1,086 ಕರೊನಾ ಪ್ರಕರಣ

    VIDEO | ಬೆಟ್ಟದ ಮೇಲೆ ಓಡಿದ ಸಚಿವರು ! ‘ಹೊಸ ಭಾರತ ಫಿಟ್ ಭಾರತ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts