ಸಿಬಿಎಸ್​ಇ : 12 ನೇ ತರಗತಿ ಪರೀಕ್ಷೆ ಮುಂದಕ್ಕೆ, 10ನೇ ತರಗತಿ ಪರೀಕ್ಷೆ ರದ್ದು

ನವದೆಹಲಿ : ಮೇ ತಿಂಗಳಲ್ಲಿ ನಡೆಯಬೇಕಿದ್ದ ಸಿಬಿಎಸ್​ಇ ಬೋರ್ಡ್​ನ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಬೋರ್ಡ್​ನ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜೂನ್ 1 ರಂದು ಪರಿಸ್ಥಿತಿಯನ್ನು ಪರಾಮರ್ಶಿಸಿ ಹೊಸ ದಿನಾಂಕಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಹೊಸ ಪರೀಕ್ಷಾ ದಿನಾಂಕವನ್ನು ಕನಿಷ್ಠ 15 ದಿನಗಳ ಕಾಲಾವಕಾಶ ನೀಡಿ ಘೋಷಿಸಲಾಗುವುದು ಎನ್ನಲಾಗಿದೆ. … Continue reading ಸಿಬಿಎಸ್​ಇ : 12 ನೇ ತರಗತಿ ಪರೀಕ್ಷೆ ಮುಂದಕ್ಕೆ, 10ನೇ ತರಗತಿ ಪರೀಕ್ಷೆ ರದ್ದು