More

    ಸಿಬಿಎಸ್​ಇ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಭಾನುವಾರ ಆರಂಭ

    ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್​ಇ) ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಿಸಲು ಅವಕಾಶ ಕೋರಿ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಇರಿಸಿದ್ದ ಪ್ರಸ್ತಾವನೆಗೆ ಕೇಂದ್ರ ಗೃಹ ಸಚಿವಾಲಯ ಶನಿವಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ (ಭಾನುವಾರ) ಮೌಲ್ಯಮಾಪನ ಕಾರ್ಯ ಆರಂಭಿಸಲು ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನಿರ್ಧರಿಸಿದೆ.

    ಮನೆಗಳಲ್ಲೇ ಮೌಲ್ಯಮಾಪನ: ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಈ ಬಾರಿ ಮೌಲ್ಯಮಾಪನ ಕೇಂದ್ರಗಳ ಬದಲು ಮೌಲ್ಯಮಾಪಕರ ಮನೆಗಳಲ್ಲೇ ನಡೆಯಲಿದೆ. ಕೋವಿಡ್​ 19 ಲಾಕ್​ಡೌನ್​ ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಈ ಬಾರಿ ಮನೆಗಳಲ್ಲೇ ಮೌಲ್ಯಮಾಪನ ಮಾಡಲು ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಅನುಮತಿ ನೀಡಿದೆ.

    ಇದನ್ನೂ ಓದಿ: ಅಮ್ಮಂದಿರ ದಿನದ ಸ್ಪೆಶಲ್​: ಬಾಲಿವುಡ್​ ತಾಯಂದಿರ ಸಂಭ್ರಮ ನೋಡಿ!

    10ನೇ ತರಗತಿಯ 18 ಲಕ್ಷ ವಿದ್ಯಾರ್ಥಿಗಳು ಹಾಗೂ 12ನೇ ತರಗತಿಯ 12 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಇನ್ನು 50 ದಿನಗಳಲ್ಲಿ ಪ್ರಕಟವಾಗಲಿದೆ. ಕೋವಿಡ್​ ಲಾಕ್​ಡೌನ್​ನಿಂದಾಗಿ ಮೌಲ್ಯಮಾಪನ ಕಾರ್ಯ ಆರಂಭಿಸಲು ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸರ್ಕಾರದ ಅನುಮತಿಯನ್ನು ನಿರೀಕ್ಷಿಸುತ್ತಿತ್ತು.

    173 ವಿಷಯಗಳ 1.5 ಕೋಟಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಮೌಲ್ಯಮಾಪಕರು ಶೀಘ್ರದಲ್ಲೇ ಮುಗಿಸುವ ಬಗ್ಗೆ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: 38 ದಿನ ವೆಂಟಿಲೇಟರ್​ ಹಾಕಿಸಿಕೊಂಡಿದ್ದರೂ ಕೋವಿಡ್​ ಗೆದ್ದ ಹೀರೋ!

    ನಿಗದಿತ 3 ಸಾವಿರ ಶಾಲೆಗಳಲ್ಲಿ ಉತ್ತರ ಪತ್ರಿಕೆಗಳನ್ನು ಭದ್ರವಾಗಿರಿಸಲಾಗಿದೆ. ಆ ಶಾಲೆಗಳಿಂದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪಕರ ಮನೆಗಳಿಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ. ಭಾನುವಾರದಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಈ ಪ್ರಕ್ರಿಯೆ 50 ದಿನಗಳಲ್ಲಿ ಮುಗಿದು, ಫಲಿತಾಂಶ ಪ್ರಕಟವಾಗುವ ಬಗ್ಗೆ ವಿಶ್ವಾಸವಿದೆ ಎಂದು ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ಹೇಳಿದ್ದಾರೆ.

    ಷಾ ಅವರ ಆರೋಗ್ಯಕ್ಕೇನಾಯಿತು!?- ಅವರ ಟ್ವೀಟ್​​ನಲ್ಲೇನಿದೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts