More

    ಸಿಬಿಎಸ್​​​ಇ 12ನೇ ತರಗತಿ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ಫಲಿತಾಂಶವನ್ನು ಹೀಗೆ ಪರಿಶೀಲಿಸಿ..

    ದೆಹಲಿ: ಸೆಂಟ್ರ್​​ಲ್ ಬ್ಯುರೋ ಆಫ್​ ಸೆಕೆಂಡರಿ ಎಜ್ಯುಕೇಶನ್​(CBSE) ಇಂದು ಅಧಿಕೃತವಾಗಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಕುರಿತು ಮಂಡಳಿಯು ತನ್ನ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ ನೀಡಿದೆ.

    ಇದನ್ನೂ ಓದಿ: ISSF ವರ್ಲ್ಡ್​ಕಪ್​: ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಕನ್ನಡತಿ

    cbseresults.nic.in ಮತ್ತು cbse.gov.in. ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಈ ವರ್ಷ 87.33% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸುವ ನಿಟ್ಟಿನಲ್ಲಿ ತನ್ನ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಅಥವಾ ಮೂರನೇ ಸ್ಥಾನವನ್ನು ಘೋಷಿಸುವುದಿಲ್ಲ ಎಂದು ಮಂಡಳಿ ಹೇಳಿದೆ.

    ಸಿಬಿಎಸ್​ಇ 12ನೇ ತರಗತಿ ಫಲಿತಾಂಶವನ್ನು ಹೀಗೆ ಪರಿಶೀಲಿಸಬಹುದು:

    ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಾಗ್ ಇನ್ ಆಗಿ, ಮುಖಪುಟದಲ್ಲಿ ಕಾಣುವ ಫಲಿತಾಂಶದ ಲಿಂಕ್​ ಮೇಲೆ ಕ್ಲಿಕ್​ ಮಾಡಿ. ನಂತರ ವಿದ್ಯಾರ್ಥಿಗಳು ರೋಲ್ ನಂಬರ್​, ಅಡ್ಮಿಟ್​ ಕಾರ್ಡ್ ಐಡಿ, ಶಾಲಾ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನ ಪರಿಶೀಲಿಸಬಹುದು. ಅಲ್ಲದೇ, ಫಲಿತಾಂಶಗಳು ಡಿಜಿಲಾಕರ್‌ನಲ್ಲಿಯೂ ಲಭ್ಯವಿರುತ್ತವೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts