ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ

cbsc
Published on

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣನಾದ 16 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸೋಮವಾರ ಪೂರ್ವ ದೆಹಲಿಯ ಲಕ್ಷ್ಮೀ ನಗರ ಪ್ರದೇಶದಲ್ಲಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯ ದೇಹವು ಪೇಯಿಂಗ್-ಗೆಸ್ಟ್ ವಸತಿಗೃಹದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ, ಉತ್ತರ ಪ್ರದೇಶದ ಇಟಾವಾದಿಂದ ಬಂದ ಮೃತ ಬಾಲಕ ಅರ್ಜುನ್ ಸಕ್ಸೇನಾ 12 ನೇ ತರಗತಿ ಪರೀಕ್ಷೆಯೊಂದಿಗೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ದೆಹಲಿಗೆ ಬಂದಿದ್ದ ಎಂದು ತಿಳಿದುಬಂದಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ತರಗತಿ -12 ಪರೀಕ್ಷೆಗಳಲ್ಲಿ ಅವರು ಎರಡು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದು ಖಿನ್ನತೆಗೆ ಒಳಗಾಗಿದ್ದ ಎಂದು ವಸತಿಗೃಹದಲ್ಲಿ ಉಳಿದುಕೊಂಡಿರುವ ಇತರರ ಹೇಳಿಕೆಗಳನ್ನು ಉಲ್ಲೇಖಿಸಿ ಅಧಿಕಾರಿ ಹೇಳಿದ್ದಾರೆ. ಘಟನೆ ಕುರಿತು ಸಕ್ಸೇನಾ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದೆ. ತೀವ್ರ ಹಂತದ ಹಿಂದಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಸಿಬಿಎಸ್‌‍ಇ 12ನೇ ತರಗತಿಯ ಬೋರ್ಡ್‌ ಪರೀಕ್ಷೆ ಪಲಿತಾಂಶ ಸೋಮವಾರ ಪ್ರಕಟವಾಗಿದೆ. ಮತ್ತೆ ಬಾಲಕಿಯರೇ ಮುಂದಿದ್ದು, ಒಟ್ಟಾರೆ ಶೇಕಡಾ 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದರೆ ಪಲಿತಾಂಶದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಸ್ವಲ್ಪ ಕುಸಿದಿದೆ. ಒಟ್ಟು 24,068 ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 1,16,145 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಾರಿ 7,126 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ದೇಶಾದಾದ್ಯಂತ 16,21000ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ 91.52 ರಷ್ಟು ಹುಡುಗಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net