ಸಿಬಿಎಸ್‌ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ

Bel_Cultural
Published on

ವಿಜಯವಾಣಿ ಸುದ್ದಿಜಾಲ ಬೆಳ್ತಗಡಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ್ ಶಾಲೆಗಳ ಐಕ್ಸ್ ಸಾಂಸ್ಕೃತಿಕ ಸ್ಪರ್ಧೆ ಆನ್ವೀಕ್ಷ್ಯಂ-2024 ಎಂಬ ಶೀರ್ಷಿಕೆಯಡಿಯಲ್ಲಿ ಬುಧವಾರ ನಡೆಯಿತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು.

ಶಾಲೆಯ ಹಳೇ ವಿದ್ಯಾರ್ಥಿನಿ ಡಾ.ಅಖಿಲ ಭಂಡಾರ್ಕರ್ ಪಿ. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿ, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಮನ್ಮೋಹನ್ ನಾಯ್ಕ ಕೆ.ಜಿ.ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಯಲ್ಲಿ ಜಿಲ್ಲೆಯ 33 ಸಿ.ಬಿ.ಎಸ್.ಇ ಶಾಲಾ ತಂಡಗಳು ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net