18.1 C
Bangalore
Saturday, December 7, 2019

ವರ್ಷವಾದರೂ ದುರಸ್ತಿ ಕಾಣದ ಸಿಸಿ ಕ್ಯಾಮರಾ

Latest News

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಪತಿಯನ್ನು ಕೊಂದಿದ್ದ ಪತ್ನಿ, ಪ್ರಿಯಕರ ಬಂಧನ

ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಆಕ್ರೋಶಗೊಂಡ ಆಕೆ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ...

ಕಾಂಗ್ರೆಸ್ ಸಾರಥ್ಯ ಮತ್ತೆ‌ ರಾಗಾ ಹೆಗಲಿಗೆ?: ಮಹತ್ವದ ಸುಳಿವು ನೀಡಿದ ಕೆ.ಸಿ.ವೇಣುಗೋಪಾಲ್​ ಹೇಳಿಕೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್​ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದ ರಾಹುಲ್​ ಗಾಂಧಿ ಮತ್ತೆ...

ಚನ್ನಕೇಶವ ದೇಗುಲದಲ್ಲಿ ಹುಂಡಿ ಎಣಿಕೆ

ಬೇಲೂರು: ಶ್ರೀಚನ್ನಕೇಶವಸ್ವಾಮಿ ದೇಗುಲದಲ್ಲಿ ಕಾರ್ತಿಕ ಮಾಸದಲ್ಲಿ ದೇಗುಲಕ್ಕೆ ಭೇಟಿ ನೀಡಿದ ಭಕ್ತರಿಂದ ಎರಡು ತಿಂಗಳ ಅವಧಿಯಲ್ಲಿ 7,93,658 ರೂ. ಕಾಣಿಕೆ ಹಣ ಸಂಗ್ರಹವಾಗಿದೆ.ಶುಕ್ರವಾರ...

ಕನ್ನಡ ಮಕ್ಕಳ ಪ್ರತಿಭೆ ಅನಾವರಣ

ಅರಕಲಗೂಡು: ಕನ್ನಡದ ಕವಿ ಕಾವ್ಯನಾಮಗಳು, ಅವರು ಬರೆದ ಪುಸ್ತಕಗಳು, ಹುಟ್ಟೂರು ಮತ್ತು ಸಾಹಿತ್ಯ ಸೇವೆಯನ್ನು ಪಟಪಟನೆ ಹೇಳುತ್ತಿದ್ದ ವಿದ್ಯಾರ್ಥಿಗಳು.. ಸರಿಯುತ್ತರ ನೀಡುತ್ತಿದ್ದಂತೆ ವಿದ್ಯಾರ್ಥಿಗಳ...

ಗಂಗೊಳ್ಳಿ: ಸುರಕ್ಷತೆ ನಿಟ್ಟಿನಲ್ಲಿ ನಾಯಕವಾಡಿ-ಗುಜ್ಜಾಡಿಯ ಪೊಲೀಸ್ ಚೆಕ್‌ಪೋಸ್ಟ್ ಮತ್ತು ಗಂಗೊಳ್ಳಿ ಗ್ರಾಮದ ಮೇಲ್‌ಗಂಗೊಳ್ಳಿಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾ ಕೆಟ್ಟು ವರ್ಷ ಕಳೆದಿದ್ದು, ಈವರೆಗೂ ದುರಸ್ತಿಯಾಗಿಲ್ಲ.
ಗುಜ್ಜಾಡಿಯಲ್ಲಿರುವ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ಎರಡು ಮತ್ತು ಮೇಲ್‌ಗಂಗೊಳ್ಳಿಯಲ್ಲಿ ಎರಡು ಗುಣಮಟ್ಟದ ಸಿಸಿ ಕ್ಯಾಮರಾಗಳನ್ನು ಗಂಗೊಳ್ಳಿ ಠಾಣೆಯ ಅಂದಿನ ಪಿಎಸ್ಸೈ ಸುಬ್ಬಣ್ಣ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಪೊಲೀಸ್ ತಂಡ 2015ರಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಅಳವಡಿಸಿತ್ತು. ಕ್ಯಾಮರಾದಲ್ಲಿ ದಾಖಲಾಗುವ ದೃಶ್ಯಗಳನ್ನು ಠಾಣಾಧಿಕಾರಿ ಮೊಬೈಲ್‌ನಲ್ಲಿ ಲೈವ್ ಆಗಿ ನೋಡುವ ತಂತ್ರಜ್ಞಾನ ಇದು ಹೊಂದಿತ್ತು.
ಸಿಸಿ ಕ್ಯಾಮರಾಗಳ ಅಳವಡಿಕೆ ಬಳಿಕ ಈ ಪರಿಸರದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಬಹಳಷ್ಟು ಕಡಿಮೆಯಾಗಿತ್ತು. ರಾಜ್ಯದ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿ ಹಾಗೂ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕಾಪಾಡುವುದು ಇಲಾಖೆಗೆ ದೊಡ್ಡ ಸವಾಲಾಗಿದೆ. ಈ ಪ್ರದೇಶಗಳಲ್ಲಿ ಪುಂಡಾಟಿಕೆಗಳಿಗೆ ಕಡಿವಾಣ, ಅಪಘಾತ ನಿಯಂತ್ರಣ, ಅಪರಾಧಿಗಳ ಪತ್ತೆಗೆ ಕ್ಯಾಮರಾ ಕಣ್ಗಾವಲು ಸಹಕಾರಿಯಾಗುತ್ತಿತ್ತು. ಈ ಎರಡೂ ಸ್ಥಳಗಳಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾ ಸುಮಾರು ಒಂದು ವರ್ಷದಿಂದ ಸ್ಥಗಿತಗೊಂಡಿರುವುದರಿಂದ ಸಮಾಜಘಾತಕ ಶಕ್ತಿಗಳಿಗೆ ವರದಾನವಾಗಿದೆ.
ಕೆಟ್ಟು ಹೋಗಿರುವ ಕ್ಯಾಮರಾಗಳ ದುರಸ್ತಿಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಳಾಗಿರುವ ಸಿಸಿ ಕ್ಯಾಮರಾಗಳ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಿಸಿ ಕ್ಯಾಮರಾ ಹಾಳಾಗಿರುವುದು ಗಮನಕ್ಕೆ ಬಂದಿದೆ. ಕುಂದಾಪುರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಪೂರ್ಣಗೊಂಡ ಬಳಿಕ ಗಂಗೊಳ್ಳಿಯ ವಿವಿಧ ಕಡೆ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು. ಕುಂದಾಪುರದಲ್ಲಿ ಈ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಪ್ರಾಯೋಗಿಕ ಪರಿಶೀಲನೆ ನಡೆಸಲಾಗುತ್ತಿದೆ.
ಹರಿರಾಮ್ ಶಂಕರ್, ಎಎಸ್ಪಿ, ಕುಂದಾಪುರ ಪೊಲೀಸ್ ಉಪವಿಭಾಗ

ಸಿಸಿ ಕ್ಯಾಮರಾಗಳಿಂದ ಗಂಗೊಳ್ಳಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರಿಯಾಗಿತ್ತು. ಈ ಎರಡೂ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾಗಳು ಹಾಳಾಗಿ ವರ್ಷಗಳೇ ಕಳೆದಿದ್ದರೂ ದುರಸ್ತಿಯಾಗಿಲ್ಲ. ಇದನ್ನು ಅತಿ ಶೀಘ್ರ ದುರಸ್ತಿಗೊಳಿಸಬೇಕು.
ನವೀನ್ ದೊಡ್ಡಹಿತ್ಲು, ಸಾಮಾಜಿಕ ಕಾರ್ಯಕರ್ತ, ಗಂಗೊಳ್ಳಿ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...