More

  ಸಿಸಿ ರಸ್ತೆ, ಚರಂಡಿ ನಿರ್ಮಾಣ ಮಾಡಿ: ಶಾಸಕ, ಅಧಿಕಾರಿಗಳಿಗೆ ನೀರಲೂಟಿ ಗ್ರಾಮಸ್ಥರ ಮನವಿ

  ಕುಷ್ಟಗಿ: ತಾಲೂಕಿನ ನೀರಲೂಟಿಯಲ್ಲಿ ಶನಿವಾರ ತಾಲೂಕು ಆಡಳಿತ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡಿದ್ದ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹಾಗೂ ಅಧಿಕಾರಿಗಳು, ಗ್ರಾಮಸ್ಥರ ಸಮಸ್ಯೆ ಆಲಿಸಿದರು.

  ಅಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ದೂರದ ಕಂಬಗಳಿಂದ ಕೇಬಲ್ ಎಳೆದುಕೊಂಡ ಬಗ್ಗೆ ಅಲವತ್ತುಕೊಂಡ ಗ್ರಾಮಸ್ಥರಿಗೆ ತಿಂಗಳೊಳಗಾಗಿ ಸಮಸ್ಯೆ ಬಗೆಹರಿಸುವುದಾಗಿ ಶಾಸಕ ಬಯ್ಯಪುರ ಭರವಸೆ ನೀಡಿದರು. ತೋಟಗಾರಿಕೆ ಕ್ಷೇತ್ರ ಹಾಗೂ ಹಂಚಿನಾಳ ಗ್ರಾಮ ಸಂಪರ್ಕಿಸುವ ರಸ್ತೆ, ಗ್ರಾಮದಲ್ಲಿ ಚರಂಡಿ, ಸಿಸಿ ರಸ್ತೆ ನಿರ್ಮಿಸುವಂತೆ ನಿವಾಸಿಗಳು ಒತ್ತಾಯಿಸಿದರು. ಕೃಷಿ ಹೊಂಡ, ಬದು ನಿರ್ಮಾಣ, ಶಿಕ್ಷಕರ ಕೊರತೆ, ಶಾಲಾ ಕಾಂಪೌಂಡ್ ಎತ್ತರಿಸುವುದು, ಕ್ರೀಡಾ ಸಾಮಗ್ರಿ ಪೂರೈಕೆ ಸೇರಿ ಹಲವು ಬೇಡಿಕೆಗಳನ್ನು ಗ್ರಾಮಸ್ಥರು ಅಧಿಕಾರಿಗಳ ಮುಂದಿಟ್ಟರು.

  ವಾರ್ಡ್‌ನಲ್ಲಿ ಚರಂಡಿ, ಸಿಸಿ ರಸ್ತೆ ಇಲ್ಲ. ಇದರಿಂದ ಮಳೆಗಾಲದಲ್ಲಿ ಓಡಾಡಲು ತೊಂದರೆಯಾಗಿದೆ. ಕೂಡಲೇ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡುವಂತೆ ಹಿರೇಮನ್ನಾಪುರದ 5ನೇ ವಾರ್ಡ್ ನಿವಾಸಿಗಳು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ವಾರ್ಡ್‌ನಲ್ಲಿ ಎಸ್ಸಿ, ಎಸ್ಟಿ ಸಮುದಾಯ ಹೆಚ್ಚಿದ್ದರೆ ಕೂಡಲೇ ಕಾಮಗಾರಿ ಕೈಗೊಳ್ಳಲು ಕ್ರಮವಹಿಸುವುದಾಗಿ ತಿಳಿಸಿದರು.

  ಗ್ರಾಪಂ ಸದಸ್ಯರಾದ ಶರಣಪ್ಪ ಬ್ಯಾಳಿ, ಹನುಮವ್ವ ಚಳ್ಳಾರಿ, ಅಕ್ಕಮಹಾದೇವಿ ಪಾಟೀಲ್, ಶರಣಪ್ಪ ಕೌದಿ, ಎಸ್ಡಿಎಂಸಿ ಅಧ್ಯಕ್ಷ ಖಾಜಾಸಾಬ್ ಪಿಂಜಾರ್, ಮುಖ್ಯಶಿಕ್ಷಕ ಶರಣಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿನಯಕುಮಾರ, ಜಿಪಂ ಉಪ ವಿಭಾಗದ ಎಇಇ ಕೈಲಾಶ್, ಲೋಕೋಪಯೋಗಿ ಇಲಾಖೆ ಎಇಇ ಪ್ರಭು ಹುನಗುಂದ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಾಲಚಂದ್ರ ಸಂಗನಾಳ, ತಾಲೂಕು ಆರೋಗ್ಯಾಧಿಕಾರಿ ಡಾ.ಆನಂದ್ ಗೋಟೂರು, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ದುರ್ಗಾಪ್ರಸಾದ್, ಬಿಇಒ ಸುರೇಂದ್ರ ಕಾಂಬ್ಳೆ, ಪಿಡಿಒ ಶಿವಪುತ್ರಪ್ಪ ಬರದೆಲಿ ಮತ್ತಿತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts