ಲಿಂಗಸುಗೂರು: ಪಟ್ಟಣದ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಭಾನುವಾರ ಭೂಮಿಪೂಜೆ ನೆರವೇರಿಸಿದರು.
2024-25 ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ 10 ಲಕ್ಷ ರೂ. ವೆಚ್ಚದಲ್ಲಿ ಕರಡಕಲ್ ಗ್ರಾಮ, 45 ಲಕ್ಷ ರೂ. ವೆಚ್ಚದಲ್ಲಿ ಪಟ್ಟಣದ ಎಸಿ ಕಚೇರಿ ಬಳಿ ಮತ್ತು 10 ಲಕ್ಷ ರೂ. ವೆಚ್ಚದಲ್ಲಿ ಬೆಂಗಳೂರು ಬೈಪಾಸ್ ರಸ್ತೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ್, ಜೆಇ ಮಂಜುನಾಥ ಕಂದಗಲ್, ಮುಖಂಡರಾದ ಗುಂಡಪ್ಪ ನಾಯಕ, ಪಾಮಯ್ಯ ಮುರಾರಿ, ಬಸವರಾಜಗೌಡ ಗಣೇಕಲ್, ಸೋಮಶೇಖರ ಐದನಾಳ, ಅನೀಸ್ ಪಾಷಾ, ಇಬ್ರಾಹಿಂ ಗ್ಯಾರಂಟಿ, ಅಬ್ದುಲ್ ಬೇಕರಿ, ಚನ್ನಾರಡ್ಡಿ ಬಿರಾದಾರ ಇತರರಿದ್ದರು.