ಇಂಡಿ ಪಟ್ಟಣದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ind 1-3 road work
ಇಂಡಿ ವಾರ್ಡ್ 13ರಲ್ಲಿ ಪುರಸಭೆ ಸದಸ್ಯ ಅನಿಲಗೌಡ ಬಿರಾದಾರ ಸಿಸಿ ರಸ್ತೆಗೆ ಚಾಲನೆ ನೀಡಿದರು.
Published on

ಇಂಡಿ: ಪಟ್ಟಣದ 13ನೇ ವಾರ್ಡಿನಲ್ಲಿರುವ ಹನುಮಾನ ಮಂದಿರದ ಹತ್ತಿರ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು.

ವಾರ್ಡ್ ಸದಸ್ಯ ಅನಿಲಗೌಡ ಬಿರಾದಾರ ಚಾಲನೆ ನೀಡಿ ಮಾತನಾಡಿ, ಜನರಿಂದ ಆಯ್ಕೆಯಾದ ನಾವು ಜನರ ಸೇವೆಗೆ ಸದಾ ಸಿದ್ಧರಿರಬೇಕು. ಈ ವಾರ್ಡಿನಲ್ಲಿ ಸಿಸಿ ರಸ್ತೆ ಈ ಮೊದಲೇ ಆಗಬೇಕಿತ್ತು. ಆದರೆ, ಅನುದಾನದ ಕೊರತೆಯಿಂದ ತಡವಾಗಿದೆ. ಈ ವಾರ್ಡ್ ಅಭಿವೃದ್ಧಿ ಮಾಡುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದರು.

ಎಸ್‌ಎ್ಸಿ 2024-25ನೇ ಸಾಲಿನಲ್ಲಿ ಅಂದಾಜು 7 ಲಕ್ಷ ರೂ. ವೆಚ್ಚದಲ್ಲಿ ಗುಣಮಟ್ಟದ ರಸ್ತೆ ನಿರ್ಮಿಸಲಾಗುತ್ತಿದೆ. ಕೆಲ ವಾರ್ಡ್‌ಗಳಲ್ಲಿ ಮಳೆಗಾಲದಲ್ಲಿ ರಸ್ತೆಗಳು ಕೆಸರು ಗದ್ದೆಗಳಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿದೆ. ಇಡೀ ಪುರಸಭೆ ವ್ಯಾಪ್ತಿಯ ರಸ್ತೆಗಳು ಸುಧಾರಣೆ ಆಗಬೇಕಾದರೆ ದೊಡ್ಡ ಪ್ರಮಾಣದಲ್ಲಿ ಅನುದಾನ ಬೇಕು. ನಮ್ಮ ಅಧಿಕಾರ ಅವಧಿ ಕಡಿಮೆ ಇರುವುದರಿಂದ ಸಾಧ್ಯವಾದ ಮಟ್ಟಿಗೆ ನೀರು, ರಸ್ತೆ, ಒಳಚರಂಡಿ ಸೇರಿ ಸಾರ್ವಜನಿಕರಿಗೆ ಬೇಕಾದ ಮೂಲ ಸೌಲಭ್ಯ ಪ್ರಾಮಾಣಿಕವಾಗಿ ಒದಗಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net