ಎಫ್​ಡಿಎ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ; ನಾಲ್ವರು ಆರೋಪಿಗಳ ಬಂಧನ..

KPSC Accused
ಆರೋಪಿಗಳಾದ ಚಂದ್ರು, ರಾಚಪ್ಪ..
Published on

ಬೆಂಗಳೂರು: ನಾಳೆ (ಜ.24) ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಚಪ್ಪ ಹಾಗೂ ಚಂದ್ರು ಎಂಬವರು ಸೇರಿ ನಾಲ್ವರನ್ನು ಬಂಧಿಸಿರುವ ಪೊಲೀಸರು, ಅವರ ಬಳಿ ಇದ್ದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜತೆಗೆ ಆರೋಪಿಗಳ ಬಳಿ ಇದ್ದ 24 ಲಕ್ಷ ರೂಪಾಯಿ ಮತ್ತು 3 ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳದಲ್ಲಿ‌ ಆರೋಪಿಗಳ ಬಂಧಿಸಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಮಾಹಿತಿಯನ್ನು ಪೊಲೀಸರು ಕೆಪಿಎಸ್​ಸಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳು ಹಾಗೂ ಬಂಧಿತರೊಂದಿಗೆ ವ್ಯವಹರಿಸಿದ್ದ ಅಭ್ಯರ್ಥಿಗಳ ಪತ್ತೆಗೂ ಮುಂದಾಗಿರುವ ಪೊಲೀಸರು, ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

2020ರ ಜನವರಿ 31ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನಾಳೆ ಅಂದರೆ 2021ರ ಜನವರಿ 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಪರೀಕ್ಷೆಗೂ ಮುನ್ನಾದಿನ ಅಂದ್ರೆ ಶನಿವಾರವೇ ಭಾನುವಾರ ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾದ್ದರಿಂದ ಪರೀಕ್ಷೆಯನ್ನು ಆಯೋಗವು ಮುಂದೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net