More

    ವಕೀಲ ನೌಷಾದ್​ಗೆ ಗುಂಡಿಕ್ಕಿದ್ದು ಭೂಗತ ಪಾತಕಿ ರವಿ ಪೂಜಾರಿ?

    ಬೆಂಗಳೂರು: ಮಂಗಳೂರಿನಲ್ಲಿ 16 ವರ್ಷಗಳ ಹಿಂದೆ ನಡೆದ ವಕೀಲ ನೌಷಾದ್‌ ಕಾಶಿಂಜಿ ಕೊಲೆಯಲ್ಲಿ ಭೂಗತ ಪಾತಕಿ ರವಿ ಪೂಜಾರಿ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಸಮಗ್ರ ತನಿಖೆಗಾಗಿ ಪ್ರಕರಣವನ್ನು ಬೆಂಗಳೂರು ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ಹಸ್ತಾಂತರಿಸಲಾಗಿದೆ.

    ಈ ಹಿನ್ನೆಲೆಯಲ್ಲಿ ಸಿಸಿಬಿ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಸದ್ಯ ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರು ಪೊಲೀಸರ ವಶದಲ್ಲಿದ್ದಾನೆ. 2009ರ ಏ.9ರಂದು ಪಳ್ನೀರ್‌ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ನೌಷಾದ್‌ನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

    ಇದನ್ನೂ ಓದಿರಿ ಪತ್ನಿ ಜತೆಗಿದ್ದ ಪರಪುರುಷನ ಗಂಟಲು ಬಗೆದು ರಕ್ತ ಕುಡಿದ… ಬೆಚ್ಚಿ ಬೀಳೀಸುತ್ತೆ ಆರೋಪಿ ಬಾಯ್ಬಿಟ್ಟ ಸತ್ಯ!

    ಭೂಗತ ದೊರೆ ದಾವೂದ್‌ ಇಬ್ರಾಹಿಂ ಸಹಚರ ರಶೀದ್‌ ಮಲಬಾರಿ ಪರವಾಗಿ ನೌಷಾದ್‌ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಕೆಲ ಸಂಘಟನೆಗಳ ಜತೆ ನಂಟು ಹೊಂದಿದ್ದರು. ಈ ಕಾರಣಕ್ಕೆ ನೌಷಾದ್​ ಮೇಲೆ ಭೂಗತ ಪಾತಕಿ ರವಿ ಪೂಜಾರಿ ಕಣ್ಣಿಟ್ಟಿದ್ದ.

    ನೌಷಾದ್‌ ಕಾಶಿಂಜಿ ಕೊಲೆಯಾಗುವ ಮುನ್ನ ರವಿ ಪೂಜಾರಿ ಕೊಲೆ ಬೆದರಿಕೆ ಹಾಕಿದ್ದ ಬಗ್ಗೆ ಕೊಲೆ ತನಿಖೆಯಲ್ಲಿ ಬಹಿರಂಗವಾಗಿತ್ತು. ಇದೀಗ ರವಿ ಪೂಜಾರಿ ಬೆಂಗಳೂರು ಪೊಲೀಸರ ವಶದಲ್ಲಿದ್ದು, ನೌಷಾದ್‌ ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದ್ದು, ಮಂಗಳೂರಿಗೆ ಆಗಮಿಸಿರುವ ಈ ತಂಡ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

    ಇದನ್ನೂ ಓದಿರಿ video/ ಮಳೆ ಸುರಿಯುತ್ತಿದ್ದರೂ ಪೊಲೀಸ್​ ಠಾಣೆ ಎದುರಲ್ಲೇ ಧರಣಿ ಕುಳಿತ ಮಹಿಳೆ, ಕ್ಯಾರೆ ಎನ್ನದ ಸಿಬ್ಬಂದಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts