ಜನಾರ್ದನ ರೆಡ್ಡಿ ಆಪ್ತ ಅಲಿಖಾನ್​ ಬಂಧನ, ರೆಡ್ಡಿಯ ವಿಚಾರಣೆ ಮುಂದುವರಿಕೆ

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ವಿಚಾರಣೆಗಾಗಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರೊಂದಿಗೆ ಸಿಸಿಬಿ ಕಚೇರಿಗೆ ಆಗಮಿಸಿದ್ದ ರೆಡ್ಡಿ ಆಪ್ತ ಅಲಿಖಾನ್​ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಲಿಖಾನ್​ ನಿವಾಸದ ಮೇಲೆ ದಾಳಿ ನಡೆಸಿದ್ದ ಸಂದರ್ಭದಲ್ಲಿ ಮನೆಯಲ್ಲಿ 5 ಜೀವಂತ ಗುಂಡುಗಳು ಪತ್ತೆಯಾಗಿದ್ದವು. ಈ ಸಂಬಂಧ ಸಿಸಿಬಿ ಪೊಲೀಸರು ಅಲಿಖಾನ್​ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ.

ತನಿಖಾಧಿಕಾರಿಗಳು ಜನಾರ್ದನ ರೆಡ್ಡಿ ಮತ್ತು ಅಲಿಖಾನ್​ರನ್ನು ಬೇರೆ ಬೇರೆ ಕೊಠಡಿಗಳಲ್ಲಿ ಪತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖಾಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಇಟ್ಟುಕೊಂಡು ಇಬ್ಬರ ಬಳಿ ಹೇಳಿಕೆ ಪಡೆಯುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಕರಣ ಮತ್ತೋರ್ವ ಆರೋಪಿ ಫರೀದ್​ನನ್ನು ಸಿಸಿಬಿ ಅಧಿಕಾರಿಗಳೂ ಕಚೇರಿಗೆ ಕರೆಸಿಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.