ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಅಮಾಯಕ ಹೆಣ್ಣು ಮಕ್ಕಳನ್ನು ಕರೆತಂದು ದುಷ್ಕೃತ್ಯ: ಇಬ್ಬರ ಬಂಧನ

Prostitution
Published on

ಬೆಂಗಳೂರು: ಲಾಕ್​ಡೌನ್ ಸಡಿಲಿಕೆಯನ್ನೇ ಬಂಡವಾಳ ಮಾಡಿಕೊಂಡ ದುಷ್ಕರ್ಮಿಗಳು ಹೊರರಾಜ್ಯದಿಂದ ಅಮಾಯಕ ಹೆಣ್ಣು ಮಕ್ಕಳನ್ನ ಕರೆತಂದು ವೇಶ್ಯಾವಾಟಿಕೆಗೆ ದೂಡುತ್ತಿರುವ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಶಿವಕುಮಾರ್ ಹಾಗೂ ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಅಮಾಯಕ ಯುವತಿಯರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದಿದ್ದರು ವೇಶ್ಯಾವಾಟಿಕೆಗೆ ದೂಡಿದ್ದರು ಎಂದು ತಿಳಿದುಬಂದಿದೆ.

ಮಾರತಹಳ್ಳಿ ಬಳಿ ದುಷ್ಕೃತ್ಯ ನಡೆಸುತ್ತಿದ್ದ ಆರೋಪಿಗಳು, ಫೋನ್ ಮೂಲಕ‌ ಗಿರಾಕಿಗಳಿಗೆ ಮಾಹಿತಿ ತಿಳಿಸಿ, ಸ್ಥಳಕ್ಕೆ ಕರೆಯಿಸಿಕೊಂಡು ಒಬ್ಬರಿಂದ 2 ರಿಂದ 3 ಸಾವಿರ ಹಣ ಪಡೆಯುತ್ತಿದ್ದರು ಎನ್ನಲಾಗಿದೆ.

ಇನ್ನೂ ಪ್ರಕರಣದಲ್ಲಿ ಆರೋಪಿ‌ ಸ್ವಾತಿ ಅಲಿಯಾಸ್​ ಸರಸ್ವತಿ ತಲೆಮರೆಸಿಕೊಂಡಿದ್ದಾಳೆ. ಸದ್ಯ ಬಂಧಿತರಿಂದ 3 ಮೊಬೈಲ್‌ ಫೋನ್, 2910 ರೂ. ನಗದು ಹಾಗೂ ಕಾಂಡೋಮ್​ಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಮಾಯಕ ಹೆಣ್ಣುಮಕ್ಕಳನ್ನು ರಕ್ಷಿಸಲಾಗಿದೆ. ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net