More

    ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ; ಹಲವು ವಸ್ತುಗಳು ವಶಕ್ಕೆ

    ಬೆಂಗಳೂರು: ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ದೂರು ಕೇಳಿ ಬಂದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಬೆಳಗಿನ ಜಾವ ಸುಮಾರು 3:30ರ ಸುಮಾರಿಗೆ ದಾಳಿ ನಡೆಸಿದ ಅಧಿಕಾರಿಗಳು ನಾಲ್ಕು ತಾಸಿಗೂ ಅಧಿಕ ಹೊತ್ತು ಜೈಲಿನಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ 40 ಸಾವಿರ ರೂಪಾಯಿ ನಗದು, 3 ಚಾಕು ಹಾಗೂ ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ.

    Police Raid
    ಸಾಂದರ್ಭಿಕ ಚಿತ್ರ

    ಇದನ್ನೂ ಓದಿ: ಬ್ರೇಕ್​ ಫೇಲ್​ ಆಗಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿ; 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

    ಈ ಕುರಿತು ಮಾತನಾಡಿದ ನಗರ ಪೊಲೀಸ್​ ಆಯುಕ್ತ ದಯಾನಂದ್​,  ಕೇಂದ್ರ ಕಾರಾಗೃಹದಲ್ಲಿ ದಿಢೀರ್‌ ತಪಾಸಣೆ ನಡೆಸಿ ₹40 ಸಾವಿರ ನಗದು ಹಾಗೂ ಮೂರು ಚಾಕುಗಳನ್ನು ಸಿಸಿಬಿ ಜಪ್ತಿ ಮಾಡಿದೆ. ಈ ಹಣ ಹಾಗೂ ಚಾಕು ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಅಕ್ರಮ ಚಟುವಟಿಕೆಗಳ ಶಂಕೆ ಮೇರೆಗೆ ಜೈಲು ತಪಾಸಣೆ ನಡೆಸಲಾಗಿದೆ.

    ರಾಮೇಶ್ವರಂ ಸ್ಫೋಟ ನಂಟು: ಇನ್ನು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಪರಪ್ಪನ ಅಗ್ರಹಾರ ಜೈಲಿಗೂ ನಂಟಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆಯೂ ಸಿಸಿಬಿ ದಾಳಿ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಗಳು ತಿಳಿಸಿವೆ. ಶಿವಮೊಗ್ಗದಲ್ಲಿ ಐಎಸ್​ಐಎಸ್ ಉಗ್ರ ಚಟುವಟಿಕೆಗೆ ಸಂಬಂಧಿಸಿ ಶಂಕಿತ ಉಗ್ರನೊಬ್ಬನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಎನ್​ಐಎ ಇತ್ತೀಚೆಗೆ ಬಂಧಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts