ಹುಬ್ಬಳ್ಳಿ | ಸಿಸಿಬಿ ಪೊಲೀಸರ ಕಾರ್ಯಾಚರಣೆ; ಪತ್ತೆಯಾಯ್ತು ಬರೋಬ್ಬರಿ 3 ಕೋಟಿ ರೂ. ಕಪ್ಪು ಹಣ

Huballi
Published on

ಹುಬ್ಬಳ್ಳಿ: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 3 ಕೋಟಿ ರೂಪಾಯಿ ಕಪ್ಪು ಹಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಆಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಅಕ್ರಮವಾಗಿ ಕಪ್ಪು ಹಣ ಸಂಗ್ರಹಿಸಿಟ್ಟಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಉದ್ಯಮಿ ರಮೇಶ್ ಬೊಣಗೇರಿ ಅವರ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ.

ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಮನೆಯನ್ನು ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಪ್ಪು ಹಣ ಸಂಗ್ರಹಿಸಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net