More

    ವರ್ಕ್​ ಫ್ರಮ್​ ಹೋಂ ಆಮಿಷವೊಡ್ಡಿ 158 ಕೋಟಿ ರೂ. ವಂಚನೆ; 11 ಮಂದಿ ಅರೆಸ್ಟ್​ ​

    ಬೆಂಗಳೂರು: ವರ್ಕ್​ ಫ್ರಂ ಹೋಂ ಆಮಿಷವೊಡ್ಡಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸುತ್ತಿದ್ದ ಬೃಹತ್​ ಜಾಲ ಒಂದನ್ನು ಭೇದಿಸಿರುವ ಸಿಸಿಬಿ ಪೊಲೀಸರು ಬೆಂಗಳೂರು, ಹೈದರಾಬಾದ್, ಮುಂಬೈನಲ್ಲಿ 11 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

    ಜನರನ್ನು ವಂಚಿಸುವ ಉದ್ದೇಶದಿಂದ ಆರೋಪಿಗಳು ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಬ್ಯಾಂಕ್‌ಗಳಲ್ಲಿ 30 ಖಾತೆಗಳನ್ನು ತೆರೆದಿದ್ದರು. ಇಂಥ ಖಾತೆಗಳಲ್ಲಿ ಇದುವರೆಗೂ ₹ 158 ಕೋಟಿ ವಹಿವಾಟು ಆಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಪ್ರಕರಣದ ಹಿನ್ನಲೆ?

    ಈ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್, ವರ್ಕ್​ ಫ್ರಂ ಹೋಂ ಆಮಿಷವೊಡ್ಡಿ ಆರೋಪಿಗಳು ವಿದ್ಯಾರಣ್ಯಪುರ ನಿವಾಸಿಯೊಬ್ಬರಿಗೆ ಮೋಸ ಮಾಡಿದ್ದರು. ಈ ಸಂಬಂಧ ಅವರು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಆರೋಪಿಗಳಾದ ಅಮಿರ್ ಸುಹಾಲಿ, ಇನಾಯತ್ ಖಾನ್, ನಯಾಜ್ ಅಹಮ್ಮದ್, ಆದಿಲ್ ಆಗಾ, ಸಯ್ಯದ್ ಅಬ್ಬಾಸ್ ಅಲಿಖಾನ್, ಮಿಥುನ್ ಮನೀಶ್ ಷಾ, ನಯನಾ, ಸತೀಶ್, ಮೀರ್ ಶಶಿಕಾಂತ್ ಷಾ ಸೇರಿ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ: ವಾರಕೊಮ್ಮೆ ಅತ್ತರೆ ನಿಮ್ಮ ಆರೋಗ್ಯ ಸುಧಾರಣೆ; ಇಲ್ಲಿದೆ ಗಮನಿಸಿ ಪೂರ್ಣ ಮಾಹಿತಿ

    ₹60 ಲಕ್ಷ ಹಣವಿದ್ದ ಆರೋಪಿಗಳ ವಿವಿಧ ಬ್ಯಾಂಕ್‌ ಖಾತೆಗಳ ವಹಿವಾಟು ಸ್ಥಗಿತಗೊಳಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್‌, 2 ಲ್ಯಾಪ್​ಟಾಪ್, 15 ಸಿಮ್ ಕಾರ್ಡ್ ಹಾಗೂ ಮೂರು ಬ್ಯಾಂಕ್‌ಗಳ ಚೆಕ್‌ ಪುಸ್ತಕ ಜಪ್ತಿ ಮಾಡಲಾಗಿದೆ. ಜನರನ್ನು ವಂಚಿಸುವ ಉದ್ದೇಶದಿಂದ ಆರೋಪಿಗಳು ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಬ್ಯಾಂಕ್‌ಗಳಲ್ಲಿ 30 ಖಾತೆಗಳನ್ನು ತೆರೆದಿದ್ದರು. ಇಂಥ ಖಾತೆಗಳಲ್ಲಿ ಇದುವರೆಗೂ ₹ 158 ಕೋಟಿ ವಹಿವಾಟು ಆಗಿದೆ. ಇದೆಲ್ಲವೂ ವಂಚನೆ ಹಣವೆಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

    ಜಾಲದ ವಂಚನೆಗೆ ಸಂಬಂಧಪಟ್ಟಂತೆ ದೇಶದಲ್ಲಿ 2,143 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 265 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 135 ಎಫ್‌ಐಆರ್ ದಾಖಲಾಗಿವೆ. ಈ ಜಾಲವು ಹಲವು ವರ್ಷಗಳಿಂದ ಕೃತ್ಯ ಎಸಗಿದ್ದು, ಆರೋಪಿಗಳ ಸುಳಿವು ಯಾರಿಗೂ ಸಿಕ್ಕಿರಲಿಲ್ಲ. ಸಿಸಿಬಿ ಸೈಬರ್ ಕ್ರೈಂ ಪೊಲೀಸರು, ನಿರಂತರವಾಗಿ ಮಾಹಿತಿ ಕಲೆಹಾಕಿ ಜಾಲ ಭೇದಿಸಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕದಿಂದ ದುಬೈವರೆಗೂ ಜಾಲ ಹಬ್ಬಿದೆ ಎಂದು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts