More

    ಸಾವಿತ್ರಿಭಾಯಿ ಫುಲೆ ಜಯಂತಿ ಶಿಕ್ಷಕಿಯರ ದಿನವನ್ನಾಗಿ ಆಚರಿಸಿ

    ನರಗುಂದ: ದಮನಿತ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು ತೆರೆದು ಕ್ರಾಂತಿಕಾರಿ ಚಳವಳಿ ಮಾಡಿದ ಭಾರತದ ಆಧುನಿಕ ಶಿಕ್ಷಣದ ಮೊದಲ ಅಕ್ಷರದಾತೆ ಸಾವಿತ್ರಿಭಾಯಿ ಫುಲೆ. ಆಗಿನ ಕಾಲದಲ್ಲಿಯೇ ರಾತ್ರಿ ಶಾಲೆಗಳನ್ನು ಪ್ರಾರಂಭಿಸಿ ಸಮಾನ ಶಿಕ್ಷಣದ ಕಲ್ಪನೆಯನ್ನು ಕೊಟ್ಟ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ದೊಡ್ಡದು. ಜ.3ರಂದು ಆಚರಿಸುವ ಫುಲೆಯವರ ಜಯಂತಿಯನ್ನು ಶಿಕ್ಷಕಿಯರ ದಿನವನ್ನಾಗಿ ಸರ್ಕಾರ ಘೋಷಣೆ ಮಾಡಬೇಕು ಎಂದು ಶಾಂತಲಿಂಗ ಶ್ರೀಗಳು ಅಭಿಪ್ರಾಯಪಟ್ಟರು.

    ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಶ್ರೀ ದೊರೆಸ್ವಾಮಿ ವಿವಿಧೋದ್ದೇಶ ಟ್ರಸ್ಟ್ ಹಾಗೂ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಾವಿತ್ರಿಭಾಯಿ ಫುಲೆ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

    ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣ ಪಡೆಯಬೇಕು ಎ್ನವ ಉದ್ದೇಶದಿಂದ, ಬಸವಾದಿ ಶಿವಶರಣರ ಕನಸನ್ನು ನನಸಾಗಿಸಲು ಹೆಣ್ಣು ಮಕ್ಕಳಿಗಾಗಿಯೇ ವಿಶೇಷ ಶಾಲೆಗಳನ್ನು, ಶಿಶು ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಮಹಿಳೆಯರ ಮತ್ತು ಮಕ್ಕಳ ಬದುಕಿಗೆ ಭದ್ರವಾದ ನೆಲೆಕೊಟ್ಟ ದಿಟ್ಟ ಸಾಮಾಜಿಕ ಹೋರಾಟಗಾರ್ತಿ ಫುಲೆಯವರು ಎಂದರು.

    ಸ್ನೇಹ ಜೀವಿ ವಿದ್ಯಾಲಯದ ಮುಖ್ಯಶಿಕ್ಷಕಿ ಮಾಲಾ ಪಾಟೀಲ ಮಾತನಾಡಿ, ಸತ್ಯಶೋಧಕ ಸಮಾಜದ ಅಧ್ಯಕ್ಷೆಯಾಗಿ 19ನೇ ಶತಮಾನದಲ್ಲಿ ಬಾಲ್ಯವಿವಾಹ, ಸತಿಸಹಗಮನ ಪದ್ಧತಿಯಂಥ ಅನಿಷ್ಠ ಪದ್ಧತಿಗಳ ವಿರುದ್ಧ ದ್ವನಿ ಎತ್ತಿದ ವೀರ ಮಹಿಳೆ ಸಾವಿತ್ರಿಭಾಯಿ ಫುಲೆಯವರು. ಬ್ರಾಹ್ಮಣ ವಿಧವೆಯ ಮಗುವೊಂದನ್ನು ದತ್ತು ಪಡೆದು ಅದಕ್ಕೆ ಶಿಕ್ಷಣ ನೀಡಿ ಬದುಕು ಕಟ್ಟಿಕೊಟ್ಟ ಅವರು ಈ ದೇಶಕ್ಕೆ ನೀಡಿದ ಕೊಡುಗೆ ಅಪಾರವಾದುದು ಎಂದರು.

    ಮುಖ್ಯ ಶಿಕ್ಷಕಿಯರಾದ ಸಲ್ಮಾ ಎ.ಎಸ್ ಹಾಗೂ ಮಾಲಾ ಪಾಟೀಲ ಅವರನ್ನು ಶ್ರೀಮಠದಿಂದ ಸತ್ಕರಿಸಲಾಯಿತು. ಶರಣಮ್ಮ ತೆಗ್ಗಿನಮನಿ, ರೇಣುಕಾ ಹುಜರತ್ತಿ , ಮೋಹನಕೃಷ್ಣ, ರೇಣಕ್ಕ ನರಸಾಪೂರ ಇತರರಿದ್ದರು. ಮಹಾಂತೇಶ ಹಿರೇಮಠ ನಿರ್ವಹಿಸಿಸದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts