More

    ಶ್ರದ್ಧಾ, ಭಕ್ತಿಯಿಂದ ಸಂಕ್ರಾಂತಿ ಆಚರಣೆ

    ರಾಯಚೂರು
    ಮಕರ ಸಂಕ್ರಮಣ ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾ, ಭಕ್ತಿಯಿಂದ ಸೋಮವಾರ ಆಚರಿಸಲಾಯಿತು. ಜನರು ಸಮೀಪದ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಿಗೆ ತೆರಳಿ ಪುಣ್ಯಸ್ನಾನ ಮಾಡಿದ ನಂತರದ ಕುಟುಂಬಸ್ಥರೊಂದಿಗೆ ಹಬ್ಬದ ಭೋಜನವನ್ನು ಸವಿದು ಸಂಭ್ರಮಿಸಿದರು.
    ಹಬ್ಬದ ನಿಮಿತ್ತ ಮನೆ ಮುಂದೆ ರಂಗೋಲಿ ಹಾಕಿದ ಮಹಿಳೆಯರು ಹಬ್ಬದ ವಿಶೇಷವಾದ ಸಜ್ಜಿ ರೊಟ್ಟಿ, ಭರ್ತ ಮುಂತಾದ ಭಕ್ಷಗಳನ್ನು ಮಾಡಿಕೊಂಡು ಕೃಷ್ಣಾ ಮತ್ತು ತುಂಗಭದ್ರಾ ನದಿಗೆ ತೆರಳಿ ಪುಣ್ಯಸ್ನಾನ ಮಾಡಿ ನದಿಗೆ ವಿಶೇಷ ಪೂಜೆ ಸಲ್ಲಿಸಿದರು.
    ತಾಲೂಕಿನ ದೇವಸುಗೂರು ಹತ್ತಿರದ ಕೃಷ್ಣಾ ನದಿ, ನಾರದಡ್ಡೆ ಚನ್ನಬಸವೇಶ್ವರ ದೇವಸ್ಥಾನ, ಕುರ್ವಕಲಾ ನಡುಗಡ್ಡೆಯ ದತ್ತ ಪೀಠ ಹಾಗೂ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪಕ್ಕದಲ್ಲಿನ ತುಂಗಭದ್ರಾ ನದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ತೆರಳಿ ಪುಣ್ಯಸ್ನಾನ ಮಾಡಿದರು.
    ಸಂಕ್ರಮಣ ನಿಮಿತ್ತ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜನರು ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದರು.

    ಮಂತ್ರಾಲಯದಲ್ಲಿ ಜನಸಂದಣಿ
    ಮಕರ ಸಂಕ್ರಾತಿ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಆಗಮಿಸಿದ್ದರು. ಶ್ರೀಮಠದ ಪಕ್ಕದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ನೆರವೇರಿಸಿದ ಭಕ್ತರು ನಂತರ ರಾಯರ ಮೂಲ ಬೃಂದಾವನ ದರ್ಶನ ಪಡೆದು ಪುನೀತರಾದರು. ಆದರೆ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಜನರು ಪುಣ್ಯಸ್ನಾನಕ್ಕಾಗಿ ಸಮಸ್ಯೆ ಎದುರಿಸುವಂತಾಗಿತ್ತು. ಹಬ್ಬದ ನಿಮಿತ್ತ ರಾಯರ ಮೂಲ ಬೃಂದಾವನಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts