ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ಟಿ.ಬಳ್ಳಕೆರೆ ಗ್ರಾಮದ ಗ್ರೀನ್‌ವುಡ್ ಶಾಲೆಯ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷ ಅಕ್ಷರಂ ವೆಂಕಟೇಶ್ ಚಾಲನೆ ನೀಡಿದರು.
ಶಾಲಾ ಆವರಣದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದ ವೇಳೆ ವಿವಿಧ ಬಗೆಯ ಹಲವು ಸಸಿಗಳನ್ನು ನೆಟ್ಟು ನೀರೆರೆದರಲ್ಲದೆ ಪ್ರತಿ ವಿದ್ಯಾರ್ಥಿಗೂ ಗಿಡ ಕೊಟ್ಟು ಪರಿಸರ ರಕ್ಷಣೆ ಮಾಡುವಂತೆ ಅರಿವು ಮೂಡಿಸಿದರು.
ಬಳಿಕ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಅಕ್ಷರಂ ವೆಂಕಟೇಶ್, ಇತ್ತೀಚಿನ ದಿನಗಳಲ್ಲಿ ಮಾನವನ ದುರಾಸೆಯಿಂದ ಪರಿಸರ ಕಣ್ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಇದನ್ನರಿತು ಪರಿಸರ ರಕ್ಷಣೆಗೆ ಪ್ರತಿಯೊಬ್ಬರೂ ಕಂಕಣಬದ್ಧರಾಗಿ ಕಾರ್ಯ ನಿರ್ವಹಿಸಬೇಕೆಂದರು.
ಕಾಡು ಕಣ್ಮರೆಯಾದಂತೆ ಕಾಡು ಪ್ರಾಣಿಗಳು ನಗರ ಪ್ರದೇಶಗಳತ್ತ ಮುಖ ಮಾಡುವುದರ ಮೂಲಕ ಹಲವು ಬಗೆಯ ಸಾವು ನೋವುಗಳು ಸಂಭವಿಸುತ್ತಿರುವ ಘಟನೆಗಳು ದಿನನಿತ್ಯ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳಾದ ತಾವುಗಳು ತಮ್ಮ ಪಾಲಕರಿಗೆ ಅರಣ್ಯದಿಂದಾಗುವ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಿ ಮರಗಳನ್ನು ಬೆಳೆಸುವ ಪ್ರತಿಜ್ಞೆಯನ್ನು ಸ್ವೀಕರಿಸಬೇಕೆಂದರು.
ವಿದ್ಯಾರ್ಥಿಗಳು ಶಾಲಾ ಮೈದಾನದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ನೀರೆರದರಲ್ಲದೆ, ಸ್ಥಳೀಯ ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಿದರು.
ಬಿಇಒ ಧನಂಜಯ, ರೋಟರಿ ಅಧ್ಯಕ್ಷ ಚನ್ನಂಕೇಗೌಡ, ಬಿಂದಾಸ್ ಶ್ರೀನಿವಾಸ್, ಬಿ.ಡಿ.ಹೊನ್ನೇಗೌಡ, ಶಾಲಾ ಮುಖ್ಯ ಶಿಕ್ಷಕಿ ಹರ್ಷಿತಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಅರ್ಥಪೂರ್ಣವಾಗಿ ಪರಿಸರ ದಿನ ಆಚರಣೆ

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar
Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…