More

    ಆರ್​ಸಿಬಿ ವಿಚಾರದಲ್ಲಿ ಯೂಟರ್ನ್​ ಹೊಡೆದ ಅಂಬಟಿ ರಾಯುಡು: ಕೊಹ್ಲಿಯನ್ನು ಟಾರ್ಗೆಟ್ ಮಾಡಿದ ರಾಯುಡು!

    ನವದೆಹಲಿ: ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡದ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿದ್ದಾರೆ. ಈ ಬಾರಿ ಅವರು ನೇರವಾಗಿ ವಿರಾಟ್​ ಕೊಹ್ಲಿ ಅವರನ್ನು ಟಾರ್ಗೆಟ್​ ಮಾಡಿ ಮಾತನಾಡಿದ್ದಾರೆ.

    ಮೇ 18ರಂದು ಸಿಎಸ್​ಕೆ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿತು. ಅಂದಿನಿಂದ ರಾಯುಡು ಅವರು ಆರ್​ಸಿಬಿ ತಂಡವನ್ನು ಗುರಿಯಾಗಿಟ್ಟುಕೊಂಡು ಟೀಕಿಸುತ್ತಿದ್ದಾರೆ. ರಾಜಸ್ಥಾನ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಗೆಲ್ಲಬೇಕು ಎಂದು ಬಯಸಿದ್ದ ರಾಯುಡು ತಕ್ಷಣವೇ ಯು-ಟರ್ನ್ ತೆಗೆದುಕೊಂಡು ಆಘಾತಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಸಿಎಸ್‌ಕೆಯನ್ನು ಸೋಲಿಸುವುದು ಕಪ್ ಗೆದ್ದಂತೆ ಅಲ್ಲ ಎನ್ನುವ ಮೂಲಕ ನೇರವಾಗಿ ಕೊಹ್ಲಿಯನ್ನು ಗುರಿಯಾಗಿಸಿ, ಟೀಕಿಸಿದ್ದಾರೆ.

    ಯಾವುದೇ ಸಂಭ್ರಮಾಚರಣೆ ಮತ್ತು ಆಕ್ರಮಣಶೀಲತೆಯಿಂದ ಐಪಿಎಲ್ ಟ್ರೋಫಿಗಳನ್ನು ಗೆಲ್ಲಲು ಸಾಧ್ಯವಿಲ್ಲ. ಕೇವಲ ಚೆನ್ನೈ ತಂಡವನ್ನು ಸೋಲಿಸಿದ ಮಾತ್ರಕ್ಕೆ ಐಪಿಎಲ್ ಟ್ರೋಫಿ ಗೆಲ್ಲುವುದಿಲ್ಲ. ಪ್ಲೇ ಆಫ್ ನಲ್ಲಿ ಚೆನ್ನಾಗಿ ಆಡಿದರೆ ಮಾತ್ರ ಕಪ್ ಗೆಲ್ಲಲು ಸಾಧ್ಯ ಎಂದು ವಿರಾಟ್ ಕೊಹ್ಲಿಯನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದ್ದಾರೆ.

    ವಿರಾಟ್ ಮೈದಾನದಲ್ಲಿ ಎಷ್ಟು ಆಕ್ರಮಣಕಾರಿ ಎಂದು ನಮಗೆಲ್ಲರಿಗೂ ತಿಳಿದಿದೆ. ಚೆನ್ನೈ ವಿರುದ್ಧ ಗೆದ್ದ ಬಳಿಕ ಕೊಹ್ಲಿ ಗೆಲುವಿನ ಸಂಭ್ರಮವನ್ನು ಗಮನದಲ್ಲಿಟ್ಟುಕೊಂಡು ರಾಯುಡು ಈ ರೀತಿ ಕಾಮೆಂಟ್ ಮಾಡಿದ್ದಾರೆ ಎಂಬುದು ನೆಟ್ಟುಗರ ಅಭಿಪ್ರಾಯ. ಅಂದಹಾಗೆ ರಾಯುಡು ನಿಜವಾಗಿಯೂ ಕೊಹ್ಲಿಯನ್ನು ಗುರಿಯಾಗಿಸಿಕೊಂಡು ಈ ಕಾಮೆಂಟ್‌ಗಳನ್ನು ಮಾಡಿದ್ದಾರಾ? ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್‌ಗಳ ರೂಪದಲ್ಲಿ ಹಂಚಿಕೊಳ್ಳಿ.

    ಪಂದ್ಯದ ವಿಚಾರಕ್ಕೆ ಬರುವುದಾದರೆ, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ, ನಿರಂತರ ವಿಕೆಟ್ ಕಳೆದುಕೊಂಡರೂ ರಜತ್ ಪಾಟೀದಾರ್ (34 ರನ್, 22 ಎಸೆತ, 2 ಬೌಂಡರಿ, 2 ಸಿಕ್ಸರ್),ವಿರಾಟ್ ಕೊಹ್ಲಿ (33 ರನ್, 24 ಎಸೆತ, 3 ಬೌಂಡರಿ, 1 ಸಿಕ್ಸರ್) ಮತ್ತು ಮಹಿಪಾಲ್ ಲೊಮ್ರೊರ್ (32 ರನ್, 17 ಎಸೆತ, 2 ಬೌಂಡರಿ, 2 ಸಿಕ್ಸರ್) ಸಂಘಟಿತ ಬ್ಯಾಟಿಂಗ್​ನೊಂದಿಗೆ 8 ವಿಕೆಟ್​ಗೆ 172 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಪ್ರತಿಯಾಗಿ ಯಶಸ್ವಿ ಜೈಸ್ವಾಲ್ (45 ರನ್, 30 ಎಸೆತ, 8 ಬೌಂಡರಿ) ಹಾಗೂ ರಿಯಾನ್ ಪರಾಗ್ (36 ರನ್, 26 ಎಸೆತ, 2 ಬೌಂಡರಿ, 2 ಸಿಕ್ಸರ್) ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ 19 ಓವರ್​ಗಳಲ್ಲಿ 6 ವಿಕೆಟ್​ಗೆ 174 ರನ್​ಗಳಿಸಿ ರೋಚಕ ಗೆಲುವು ಕಂಡಿತು. ಸಂಜು ಸ್ಯಾಮ್ಸನ್ ಪಡೆ ಶುಕ್ರವಾರ ನಡೆಯಲಿರುವ ‘ಸೆಮಿಫೈನಲ್’ ಮಾದರಿಯ ಎರಡನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದಿದ್ದು, ಪ್ರಶಸ್ತಿ ಸುತ್ತಿಗೇರಲು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ. (ಏಜೆನ್ಸೀಸ್​)

    IPL 2024: ಎಲಿಮಿನೇಟರ್ ಪಂದ್ಯದಲ್ಲಿ RR ವಿರುದ್ಧ RCB ಸೋಲಿಗೆ 5 ಪ್ರಮುಖ ಕಾರಣಗಳು ಹೀಗಿವೆ…

    IPL 2024: ಎಲಿಮಿನೇಟರ್ ಪಂದ್ಯದಲ್ಲಿ RR ವಿರುದ್ಧ RCB ಸೋಲಿಗೆ 5 ಪ್ರಮುಖ ಕಾರಣಗಳು ಹೀಗಿವೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts