

ಹೆಬ್ರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ಐಕ್ಯುಎಸಿ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಸಹಯೋಗದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನ ಆಚರಿಸಲಾಯಿತು.
ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ವಿಜಯಕುಮಾರ್ ಜೆ.ಪಿ., ಡಾ.ಅಂಬೇಡ್ಕರ್ ಜೀವನ, ಕೊಡುಗೆ ಬಗ್ಗೆ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಡಾ.ವಿದ್ಯಾಧರ್ ಹೆಗ್ಡೆ ಎಸ್. ಮಾತನಾಡಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಸಂಚಾಲಕ ಡಾ.ಪ್ರವೀಣ್ ಎಸ್. ಸಂವಿಧಾನ ಪೀಠಿಕೆ ಬೋಧಿಸಿದರು. ಅಂಬೇಡ್ಕರ್ ಕುರಿತು ಸಾಕ್ಷೃಚಿತ್ರ ಪ್ರದರ್ಶನ, ರಸಪ್ರಶ್ನೆ ಸ್ಪರ್ಧೆ ನಡೆಯಿತು. ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ಪ್ರಿಯಾಂಕಾ ವಂದಿಸಿದರು. ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.