ಜಮ್ಮು ಮತ್ತು ಕಾಶ್ಮಿರ ಕೇಂದ್ರಾಡಳಿತಕ್ಕೆ ಒಂದು ವರ್ಷ ಪೂರೈಸಿದ ಸಂಭ್ರಮ; ವಿಶೇಷತೆ ಏನು?

UT
Published on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಆಗಸ್ಟ್ 5 ರಂದು ಕೇಂದ್ರಾಡಳಿತ ಪ್ರದೇಶವಾಗಿ ಒಂದು ವರ್ಷವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮಿರಕ್ಕೆ ಭೇಟಿ ನೀಡುವ ಮಾಧ್ಯಮ ತಂಡಗಳೊಂದಿಗೆ ಸಮನ್ವಯ ಸಾಧಿಸಲು ಇಲ್ಲಿಯ ಆಡಳಿತವು ಐವರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ.

ಈ ಕುರಿತು ಸಾರ್ವಜನಿಕ ಆಡಳಿತ ಇಲಾಖೆ ಬುಧವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಹಲವು ಮಾಧ್ಯಮ ತಂಡಗಳು ಕೇಂದ್ರಾಡಳಿತ ಪ್ರದೇಶದಲ್ಲಿನ ಬೆಳವಣಿಗೆಗಳ ಬಗ್ಗೆ ವರದಿ ಮಾಡಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಕಳೆದ ಒಂದು ವರ್ಷದಲ್ಲಿ ಆಗಿರುವ ಸಕಾರಾತ್ಮಕ ಬದಲಾವಣೆಗಳು ಹಾಗೂ ಆಡಳಿತದ ದೃಷ್ಟಿಕೋನವನ್ನು ಪ್ರಮುಖವಾಗಿ ಬಿತ್ತರಿಸಲು ಭೇಟಿ ನೀಡುವ ಪತ್ರಕರ್ತರು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಕೆಲ ನಾಗರಿಕ ಸಮಾಜ ಕಾರ್ಯಕರ್ತರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net