More

  ಪಾಲಿಬೆಟ್ಟದಲ್ಲಿ ಸಹಕಾರ ಸಪ್ತಾಹ ಆಚರಣೆ

  ಸಿದ್ದಾಪುರ: 70ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆಯನ್ನು ಪಾಲಿಬೆಟ್ಟದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಇತ್ತೀಚೆಗೆ ಆಚರಿಸಲಾಯಿತು.

  ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿ ಹೊಂದುವ ಮೂಲಕ ಸಹಕಾರಿ ಬಂಧುಗಳ ಬೆನ್ನೆಲುಬಾಗಿ ನಿಂತಿದ್ದು ಬಂಧುಗಳು ಸಹಕಾರ ಸಂಘಗಳ ಮೂಲಕ ಆರ್ಥಿಕತೆಯ ಲಾಭಾಂಶದೊಂದಿಗೆ ಅಭಿವೃದ್ಧಿಯೊಂದಿಗೆ ಮುನ್ನಡೆಯಬೇಕು. ಪ್ರತಿಯೊಬ್ಬರೂ ಸಹಕಾರ ಸಂಘದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.

  ಬ್ಯಾಂಕಿನ ವ್ಯವಸ್ಥಾಪಕರಾದ ಲವ್ಲಿ, ಸಿಬ್ಬಂದಿ ಸತೀಶ್, ಕೀರ್ತನ್ ಬೋಪಣ್ಣ, ಬಸವರಾಜು, ಸಂತೋಷ್, ಅಯ್ಯಪ್ಪ, ಸಂಧ್ಯಾ, ದೀನು ಬೋಪಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts