ಶ್ರದ್ಧಾಭಕ್ತಿಯೊಂದಿಗೆ ರಂಜಾನ್ ಹಬ್ಬ ಆಚರಣೆ * ಸಚಿವ ಎನ್.ಎಸ್.ಬೋಸರಾಜು ಸೇರಿ ಅನೇಕರು ಭಾಗಿ

Ramzan
Ramzan
Published on

ರಾಯಚೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಸಮಾಜದಿಂದ ಸೋಮವಾರ ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮದಿAದ ರಂಜಾನ್ ಹಬ್ಬ ಆಚರಿಸಿದರು.

ಬೆಳಗ್ಗೆಯಿಂದಲೇ ನಗರದ ಬಸವೇಶ್ವರ ವೃತ್ತದ ಹತ್ತಿರದ ಈದ್ಗಾ ಮೈದಾನಕ್ಕೆ ತೆರಳಿದ ಮುಸ್ಲಿಂಮರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಹಿಂದೂಗಳ ಹೊಸ ವಷÀð ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವಾದೆ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಆಚರಿಸುತ್ತಿದ್ದಾರೆ.

ಸಮಾಜದ ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ದಾನ - ಧರ್ಮದ ಮಹತ್ವ ಕುರಿತು ಭೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ವÊದ್ದರಿಂದ ಹಿಡಿದು ಚಿಕ್ಕಮಕ್ಕಳು ಕೂಡ ಭಾಗವಹಿಸಿ ಪರಸ್ಪರ ಅಪ್ಪಿಕೊಂಡು ಸೋದರತ್ವ ಮೆರೆದರು. ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ರAಜಾನ್ ಹಬ್ಬದ ನಿಮಿತ್ತ ರಾಯಚೂರು ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ ೬ ಗಂಟೆಯವರೆಗೆ ವ್ಯಾಪರ ವಹಿವಾಟು ನಡೆಯಿತು. ಮುಸ್ಲಿಂಮರು ರಾತ್ರಿಯಿಡಿ ಹಬ್ಬಕ್ಕೆ ಹೊಸ ಉಡುಪುಗಳನ್ನು ಖರೀದಿ ಮಾಡಿದರು.

ಹಬ್ಬದ ನಿಮಿತ್ತ ಈ ಬಾರಿ ವಿಶೇಷವಾಗಿ ಪ್ರಾರ್ಥನೆ ಮಾಡುವ ಸ್ಥಳದಲ್ಲಿ ಮಹಾ ನಗರ ಪಾಲಿಕೆಯಿಂದ ಬಿಸಿಲಿನಿಂದ ಸುಡಬಾರದು ಎಂದು ಗ್ರೀನ್ ಮ್ಯಾಟ್ ಅಳವಡಿಕೆ ಮಾಡಲಾಗಿತ್ತು. ಜತೆಗೆ ಸ್ಥಳದಲ್ಲಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಪ್ರಾರ್ಥನಾ ಸ್ಥಳದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಂಸದ ಜಿ.ಕುಮಾರ ನಾಯಕ,ಕಾಂಗ್ರೆಸ್ ಮುಖಂಡ ರವಿ ಭೋಸರಾಜು,ಕೆ.ಶಾಂತಪ್ಪ, ಜಿ.ಶಿವಮೂರ್ತಿ ಸೇರಿ ಅನೇಕರು ಭಾಗವಹಿಸಿ ಹಬ್ಬದ ಶುಭಾಶಯ ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net