

ನವದೆಹಲಿ: ಹಮಾಸ್ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿ 300ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಬೆನ್ನಲ್ಲೇ ಲಂಡನ್ನ ಬೀದಿಗಳಲ್ಲಿ ಸಂಭ್ರಮಾಚರಣೆಗಳು ಮುಗಿಲು ಮುಟ್ಟಿದೆ. ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇತ್ತ ಲಂಡನ್ನ ಬೀದಿಗಳಲ್ಲಿ ಹಮಾಸ್ ಬೆಂಬಲಿಗರ ಸಂಭ್ರಮಾಚರಣೆಯ ಫೋಟೋ ಹಾಗೂ ವಿಡಿಯೋ ಆದ ಬೆನ್ನಲ್ಲೇ ಕ್ರಮ ಕೈಗೊಂಡಿರುವ ಪೊಲೀಸರು ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ ಎಂದು ತಿಳಿಸಿದೆ. ಇತ್ತ ವಿಡಿಯೋ ವೈರಲ್ ಆದ ಬೆನ್ನಲ್ಲೇ ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಮೆಟ್ರೋಪಾಲಿಟನ್ ಇಲಾಖೆಯು, ಇಸ್ರೇಲ್ ಮತ್ತು ಗಾಜಾ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ಗಳು ಸೇರಿದಂತೆ ಹಲವಾರು ಘಟನೆಗಳ ಬಗ್ಗೆ ನಮಗೆ ತಿಳಿದಿದೆ.
ಉಭಯ ದೇಶಗಳ ನಡುವೆ ನಡೆಯುತ್ತಿರುವ ಘರ್ಷಣೆ ಮುಂದಿನ ದಿನಗಳಲ್ಲಿ ವಿಶ್ವವ್ಯಾಪಿಯಾಗಿ ದೊಡ್ಡಮಟ್ಟದಲ್ಲಿ ಹರಡಬಹುದು. ಲಂಡನ್ನ ನಿವಾಸಿಗಳಿಗೆ ಯಾವುದೇ ಅಡ್ಡಿಯಾಗದಂತೆ ಪ್ರತಿಭಟಿಸಲು ಸೂಕ್ತ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಅವಕಾಶವನ್ನುಕಲ್ಪಿಸಲಾಗುವುದು ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಲಂಡನ್ ಪೊಲೀಸ್ ಇಲಾಖೆ ಬರೆದುಕೊಂಡಿದೆ.