More

    ಪ್ರತಿ ತಿಂಗಳ 3ನೇ ಶನಿವಾರ ಶಾಲೆಗಳಲ್ಲಿ ಬ್ಯಾಗ್ ರಹಿತ ದಿನದ ಆಚರಣೆ

    ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

    School re open
    ಸಂಗ್ರಹ ಚಿತ್ರ

    ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

    ಪ್ರತಿ ತಿಂಗಳ 3ನೇ ಶನಿವಾರ ಶಾಲೆಗಳಲ್ಲಿ ಬ್ಯಾಗ್ ರಹಿತ ದಿನದ ಆಚರಣೆ

    ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ.ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

    ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ. ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್‌ಇಆರ್‌ಟಿ ವೆಬ್‌ಸೈಟ್ https://dsert.karnataka.gov.in/ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

    ಪ್ರತಿ ತಿಂಗಳ 3ನೇ ಶನಿವಾರ ಶಾಲೆಗಳಲ್ಲಿ ಬ್ಯಾಗ್ ರಹಿತ ದಿನದ ಆಚರಣೆ
    ಸಾಂದರ್ಭಿಕ ಚಿತ್ರ

    2019ರ ಆದೇಶ, ಈಗ ಅನುಷ್ಠಾನ: ಡಿಎಸ್‌ಇಆರ್‌ಟಿ 2017ರಲ್ಲಿ ಬ್ಯಾಗ್ ರಹಿತ ದಿನ ಆಚರಿಸುವ ಸಂಬಂಧ ಕಾರ್ಯಕ್ರಮ ರೂಪಿಸಿತ್ತು. ಇದನ್ನು 2019ರಲ್ಲಿ ಯೋಜನೆ ಅನುಷ್ಠಾನಕ್ಕೆ ಆದೇಶ ಹೊರಡಿಸಿತ್ತು. ಕರೊನಾ ಸೇರಿ ಇನ್ನಿತರ ಕಾರಣಗಳಿಗೆ ಯೋಜನೆ ಅನುಷ್ಠಾನ ಆಗಿರಲಿಲ್ಲ. ಇದೀಗ, ನೂತನ ಸರ್ಕಾರವು ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.

    ಏನೆಲ್ಲ ಚಟುವಟಿಕೆಗಳು: ಘನತ್ಯಾಜ್ಯ ನಿರ್ವಹಣೆ, ಸುರಕ್ಷಿತ ತಂತ್ರಜ್ಞಾನ ಬಳಕೆ, ಸುರಕ್ಷತೆ ಮತ್ತು ಭದ್ರತೆ, ಸಾರ್ವಜನಿಕ ಸೌಕರ್ಯ, ರಸ್ತೆ ಸುರಕ್ಷತೆ, ಸ್ವಾಸ್ಥ್ಯ ಮತ್ತು ಶುಚಿತ್ವ, ಮಾದಕವಸ್ತು, ಲಿಂಗ ಸಮಾನತೆ, ಆರೋಗ್ಯಕರ ಜೀವನಶೈಲಿ ಸೇರಿ ಇನ್ನಿತರ ವಿಷಯಗಳ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಗುತ್ತದೆ.

    ಉದ್ಯೋಗಿಗಳಿಗೆ ಹಾಗಲಕಾಯಿ ತಿನ್ನಿಸಿದ ಕಂಪನಿ; ಕಾರಣ ತಿಳಿದರೆ ಶಾಕ್ ಆಗ್ತೀರಾ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts